ಸುಳ್ಯ : Tulu Times l ಕರ್ನಾಟಕ ಜರ್ನಲಿಸ್ಟ್ ಯೂನಿಯನ್, ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಆಟಿ ಆಚರಣೆ ಹಾಗೂ ಆಟಿಕೂಟ ಕಾರ್ಯಕ್ರಮವು ಜುಲೈ 22ರಂದು (ಬುಧವಾರ) ಬೆಳಗ್ಗೆ 10.30 ಗಂಟೆಗೆ ಸುಳ್ಯದ ರಂಗಮಯೂರಿ ಕಲಾ ಶಾಲೆ, ಶ್ರೀಹರಿ ಬಿಲ್ಡಿಂಗ್ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು, ಆಟಿ ಮತ್ತು ಪತ್ರಿಕಾ ದಿನ ಕುರಿತು ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಅಧ್ಯಕ್ಷತೆ ವಹಿಸಲಿದ್ದು, ಪ್ರಗತಿಪರ ಕೃಷಿಕ ಅಶೋಕ್ ಪ್ರಭು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ರಂಗಮಯೂರಿ ಕಲಾ ಶಾಲೆಯ ಸಂಚಾಲಕ ಲೋಕೇಶ್ ಊರುಬೈಲು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಅಧ್ಯಕ್ಷ ಈಶ್ವರ ವಾರಣಾಶಿ ಹಾಗೂ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಅಪ್ಪಕುಂಞ ನಾರ್ಕೋಡು ಹಾಗೂ ಎಸ್.ಎನ್. ಪ್ರಸಾದ್ ಪಂಜಿಕಲ್ಲು ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಸಭಾ ಕಾರ್ಯಕ್ರಮದ ಬಳಿಕ ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರಿಂದ ಮಿಮಿಕ್ರಿ ಪ್ರದರ್ಶನ ನಡೆಯಲಿದ್ದು, ನಂತರ ಚೆನ್ನೆಮಣೆ ಸೇರಿದಂತೆ ವಿವಿಧ ಆಟಿ ಸ್ಪರ್ಧೆಗಳು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂತ್ಯದಲ್ಲಿ ಆಟಿಯ ವಿಶೇಷ ಖಾದ್ಯಗಳೊಂದಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Press Day Celebration and ‘Aati’ Festivities in Sullia on July 22 – ತುಳುಟೈಮ್ಸ್
ಇದನ್ನೂ ಓದಿ :‘ಮೆಡಿಕಲ್ ಸೀಟ್ ಕೊಡಿಸುತ್ತೇವೆ’ ಎನ್ನುವ ಏಜೆಂಟರಿಂದ ಎಚ್ಚರ; ಕೆಇಎ ಮಹತ್ವದ ಸೂಚನೆ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://tulutimes.com/10039/belthangady/leopard-enters-cattle-shed-in-bandaru-attacks-calf/











