ಪುತ್ತೂರು: Tulu Times l ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಜ್ಜಾಗುತ್ತಿರುವ ಅಭ್ಯರ್ಥಿಗಳಿಗಾಗಿ ಪುತ್ತೂರಿನ ಪ್ರತಿಷ್ಠಿತ ವಿದ್ಯಾಮಾತಾ ಅಕಾಡೆಮಿ ಉಚಿತ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ಆಗಸ್ಟ್ 9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಸಭಾಂಗಣದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸುವ ವಿಧಾನಗಳು, ಪಠ್ಯಕ್ರಮದ ಸಮಗ್ರ ವಿಶ್ಲೇಷಣೆ, ಸಮಯ ನಿರ್ವಹಣೆ, ಪ್ರಶ್ನೆಪತ್ರಿಕೆ ವಿಶ್ಲೇಷಣೆ ಹಾಗೂ ಯಶಸ್ಸಿನ ತಂತ್ರಗಳ ಕುರಿತು ವಿಷಯ ತಜ್ಞರು ನೇರ ಮಾರ್ಗದರ್ಶನ ನೀಡಲಿದ್ದಾರೆ. ಪರೀಕ್ಷೆಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
ಉದ್ಯೋಗ ಜಾಗೃತಿಗೆ ವಿದ್ಯಾಮಾತಾ ಅಕಾಡೆಮಿಯ ಕೊಡುಗೆ ;
ಕರಾವಳಿ ಭಾಗದ ಗ್ರಾಮೀಣ ಹಾಗೂ ನಗರ ಪ್ರದೇಶದ ಯುವಜನರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ವಿದ್ಯಾಮಾತಾ ಅಕಾಡೆಮಿ ಪ್ರಮುಖ ಪಾತ್ರ ವಹಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಜಾಗೃತಿ ಕಾರ್ಯಕ್ರಮಗಳು ಹಾಗೂ ಖಾಸಗಿ ಉದ್ಯೋಗ ಕೌಶಲ್ಯ ತರಬೇತಿಗಳನ್ನು ಆಯೋಜಿಸುವ ಮೂಲಕ ವಿಭಿನ್ನ ಮಾದರಿಯನ್ನು ರೂಪಿಸಿದೆ.

ನೂರಾರು ವಿದ್ಯಾರ್ಥಿಗಳಿಗೆ ಯಶಸ್ಸಿನ ದಾರಿ ;
ಕಳೆದ ಹಲವು ವರ್ಷಗಳಿಂದ ಬ್ಯಾಂಕಿಂಗ್, ಕೆಪಿಎಸ್‌ಸಿ, ಪೊಲೀಸ್, ರೈಲ್ವೇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿ ಮೂಲಕ ನೂರಾರು ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಗುಣಮಟ್ಟದ ಬೋಧನೆ, ಅನುಭವಿ ಮಾರ್ಗದರ್ಶಕರು ಮತ್ತು ನಿಯಮಿತ ಮಾದರಿ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಹಾಗೂ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳು ಈ ಉಚಿತ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.
ನೋಂದಣಿಗಾಗಿ: ವಿದ್ಯಾಮಾತಾ ಅಕಾಡೆಮಿ, ಎಪಿಎಂಸಿ ರಸ್ತೆ, ಪುತ್ತೂರು. ದೂರವಾಣಿ: 85907 73486 / 94485 27606.
Free training workshop for the Village Administrative Officer exam in Puttur on August 9. – ತುಳು ಟೈಮ್ಸ್
ಇದನ್ನೂ ಓದಿ : ಫಲಾನುಭವಿಗಳ ಪರ ಸರ್ಕಾರದ ಮಹತ್ವದ ನಿರ್ಧಾರ: ರೇಷನ್ ಅಂಗಡಿಗಳ ಸಮಯ ಹೆಚ್ಚಳ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/5C4rFNGDf_w











