ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ ಯುವಜನ ಸಂಯುಕ್ತ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುಳ್ಯ: Tulu Times l ಸುಳ್ಯ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪ್ರತಿ ವರ್ಷ ನೀಡಲಾಗುವ ತಾಲೂಕು ಮಟ್ಟದ ಅತ್ಯುತ್ತಮ ಯುವಕ-ಯುವತಿ ಮಂಡಲ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025ರ ಆಗಸ್ಟ್‌ನಿಂದ 2026ರ ಜುಲೈ 31ರವರೆಗೆ ಯುವಕ-ಯುವತಿ ಮಂಡಲಗಳು ಕೈಗೊಂಡಿರುವ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ಇತರ ಸಮಾಜಮುಖಿ ಚಟುವಟಿಕೆಗಳ ಆಧಾರದ ಮೇಲೆ ಪ್ರಶಸ್ತಿಗೆ ಆಯ್ಕೆ ನಡೆಯಲಿದೆ.

ಆಸಕ್ತ ಯುವಕ-ಯುವತಿ ಮಂಡಲಗಳು ತಮ್ಮ ಚಟುವಟಿಕೆಗಳ ವಿವರ, ವರದಿಗಳು, ಛಾಯಾಚಿತ್ರಗಳು ಹಾಗೂ ಸಂಬಂಧಿತ ದಾಖಲೆಗಳನ್ನು ಒಳಗೊಂಡ ಅರ್ಜಿಯನ್ನು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಿಗೆ ಅಥವಾ ತಮ್ಮ ವ್ಯಾಪ್ತಿಯ ಉಸ್ತುವಾರಿ ನಿರ್ದೇಶಕರಿಗೆ ಸಲ್ಲಿಸಬಹುದಾಗಿದೆ. 2025–26ನೇ ಸಾಲಿನಲ್ಲಿ ಯುವಜನ ಸಂಯುಕ್ತ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಅಥವಾ ತಮ್ಮ ನೋಂದಣಿಯನ್ನು ನವೀಕರಿಸಿಕೊಂಡಿರುವ ಯುವಕ-ಯುವತಿ ಮಂಡಲಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು 2026ರ ಆಗಸ್ಟ್ 30 ಕೊನೆಯ ದಿನವಾಗಿದ್ದು, ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ಮಂಡಳಿ ಮನವಿ ಮಾಡಿದೆ. ಆಯ್ಕೆಯಾಗುವ ಅತ್ಯುತ್ತಮ ಯುವಕ-ಯುವತಿ ಮಂಡಲಗಳಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 94834 59113, 90082 19773 ಹಾಗೂ 94819 87630 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Applications invited for the Sullia Yuvajana Samyukta Mandali Award – ತುಳುಟೈಮ್ಸ್

ಇದನ್ನೂ ಓದಿ :ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಕೀ ಉತ್ತರ ಪ್ರಕಟ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 9

You cannot copy content of this page