ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ ಕ್ಷೇತ್ರದ ಮೂರು ಪ್ರಮುಖ ರಸ್ತೆ ಅಭಿವೃದ್ಧಿಗೆ ಮುನ್ನಡೆ; ಡಿಪಿಆರ್ ಟೆಂಡರ್ ಪ್ರಕ್ರಿಯೆ ಪೂರ್ಣ

ಸುಳ್ಯ: Tulu Times l ಸುಳ್ಯ ವಿಧಾನಸಭಾ ಕ್ಷೇತ್ರದ ಜನರು ಬಹುಕಾಲದಿಂದ ನಿರೀಕ್ಷಿಸುತ್ತಿದ್ದ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಹತ್ವದ ಮುನ್ನಡೆ ದೊರೆತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ–5, ಘಟ್ಟ–2ರ ಅಡಿಯಲ್ಲಿ ಕ್ಷೇತ್ರದ ಮೂರು ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಯೋಜನಾ ವರದಿ ಸಿದ್ಧಪಡಿಸುವ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನಿರಂತರವಾಗಿ ಸರ್ಕಾರದ ಗಮನ ಸೆಳೆದಿದ್ದು, ಅವರ ಪ್ರಯತ್ನದ ಫಲವಾಗಿ ರಸ್ತೆ ಅಭಿವೃದ್ಧಿ ಪ್ರಕ್ರಿಯೆ ಇದೀಗ ವೇಗ ಪಡೆದುಕೊಂಡಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಡಿಪಿಆರ್ ಸಿದ್ಧಪಡಿಸುವ ಕಾರ್ಯ ಆರಂಭವಾಗಲಿದೆ.

ಯೋಜನೆಯಡಿ ಮರ್ಕಂಜ–ಎಲಿಮಲೆ ರಸ್ತೆ, ಎಡಮಂಗಲ–ಪುಲಿಕುಕ್ಕು ರಸ್ತೆ ಹಾಗೂ ಐವರ್ನಾಡು–ದರ್ಖಾಸು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನವನ್ನು ಮೀಸಲಿರಿಸಲಾಗಿದ್ದು, ತಾಂತ್ರಿಕ ವರದಿ ಪೂರ್ಣಗೊಂಡ ಬಳಿಕ ಕಾಮಗಾರಿಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ.

ಡಿಪಿಆರ್‌ನಲ್ಲಿ ರಸ್ತೆ ಅಗಲೀಕರಣ, ಗುಣಮಟ್ಟದ ಡಾಂಬರೀಕರಣ, ಚರಂಡಿ ನಿರ್ಮಾಣ, ಸುರಕ್ಷತಾ ಕ್ರಮಗಳು ಸೇರಿದಂತೆ ಅಗತ್ಯ ತಾಂತ್ರಿಕ ಅಂಶಗಳನ್ನು ಒಳಗೊಂಡ ಸಮಗ್ರ ಯೋಜನೆ ರೂಪಿಸಲಾಗುತ್ತದೆ. ವರದಿ ಸಲ್ಲಿಕೆಯಾದ ಬಳಿಕ ಟೆಂಡರ್ ಆಹ್ವಾನಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌ ಈ ರಸ್ತೆಗಳು ಅಭಿವೃದ್ಧಿಗೊಂಡರೆ ಗ್ರಾಮೀಣ ಪ್ರದೇಶದ ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸುಲಭವಾಗಿ ಸಾಗಿಸಲು ಅನುಕೂಲವಾಗುವುದರ ಜೊತೆಗೆ ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ಸಾರ್ವಜನಿಕರ ದೈನಂದಿನ ಸಂಚಾರವೂ ಸುಗಮವಾಗಲಿದೆ. ಅಲ್ಲದೆ, ಪ್ರದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಹೊಸ ಉತ್ತೇಜನ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಶಾಸಕಿ ಭಾಗೀರಥಿ ಮುರುಳ್ಯ ಅವರು ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ರಸ್ತೆ, ಕುಡಿಯುವ ನೀರು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Three major road developments in Sulya Kshetra are ahead; DPR tender process complete – ತುಳುಟೈಮ್ಸ್

ಇದನ್ನೂ ಓದಿ :ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page