ಧ್ವಜ : Tulu Times l ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳ ಸಂದರ್ಭದಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಾರದು ಎಂದು ಭಾರತ ಸರ್ಕಾರದ ಗೃಹ ಸಚಿವಾಲಯದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಾರ್ವಜನಿಕರಿಗೆ ಸೂಚನೆ ನೀಡಿದೆ. ರಾಷ್ಟ್ರೀಯ ಗೌರವ ಕಾಯ್ದೆ–1971 ಹಾಗೂ ಭಾರತದ ಧ್ವಜ ಸಂಹಿತೆ–2002 (2021 ಮತ್ತು 2022ರ ತಿದ್ದುಪಡಿಗಳೊಂದಿಗೆ) ಅನ್ವಯ ಈ ಸೂಚನೆ ಜಾರಿಯಲ್ಲಿದ್ದು, ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದರ ಬದಲಾಗಿ ಕಾಗದ ಅಥವಾ ಬಟ್ಟೆಯಿಂದ ತಯಾರಿಸಿದ, ಮರದ ಅಥವಾ ಪೇಪರ್ ಕಡ್ಡಿ ಹೊಂದಿರುವ ರಾಷ್ಟ್ರಧ್ವಜಗಳನ್ನು ಮಾತ್ರ ಬಳಸುವಂತೆ ಮನವಿ ಮಾಡಲಾಗಿದೆ. ಇದರ ಜೊತೆಗೆ, ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್, ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ತಟ್ಟೆ, ಲೋಟ, ಚಮಚ, ಸ್ಟ್ರಾ, ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಪ್ಲಾಸ್ಟಿಕ್ ಹಾಳೆ, ಥರ್ಮೋಕೋಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋಬೀಡ್ಸ್ನಿಂದ ತಯಾರಿಸಿದ ವಸ್ತುಗಳನ್ನು ಬಳಸದಂತೆ ಸೂಚಿಸಲಾಗಿದೆ.

ಪರಿಸರ ಸಂರಕ್ಷಣೆ ಹಾಗೂ ರಾಷ್ಟ್ರೀಯ ಗೌರವವನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕರು ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Save the environment, uphold national honor: Ban on plastic flags – ತುಳುಟೈಮ್ಸ್
ಇದನ್ನೂ ಓದಿ :ಭಾರೀ ಮಳೆ ಹಿನ್ನೆಲೆ ದ.ಕ. ನಾಲ್ಕು ತಾಲೂಕುಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ಶನಿವಾರ ರಜೆ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/IKW_z7twgxc











