ಬ್ರೇಕಿಂಗ್ ನ್ಯೂಸ್
ಕರ್ನಾಟಕ

ತೋಟಗಾರಿಕೆ ಇಲಾಖೆಯಲ್ಲಿ 85 ಹುದ್ದೆಗಳ ನೇಮಕಾತಿ; ಆ.30 ಅರ್ಜಿ ಸಲ್ಲಿಕೆಗೆ ಕೊನೇ ದಿನ

ಬೆಂಗಳೂರು: Tulu Times l ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌-ಬಿ ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಒಟ್ಟು 85 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 30 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಏನು?

ಸಹಾಯಕ ತೋಟಗಾರಿಕೆ ನಿರ್ದೇಶಕ ಹುದ್ದೆಗೆ ತೋಟಗಾರಿಕೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗೆ ತೋಟಗಾರಿಕೆಯಲ್ಲಿ ಬಿ.ಎಸ್‌ಸಿ ಪದವಿ ಪಡೆದಿರಬೇಕು.

ಸರ್ಕಾರದ ನಿಯಮಗಳ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ ; ಅಭ್ಯರ್ಥಿಗಳನ್ನು ಕೆಇಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ ಜ್ಞಾನ ಹಾಗೂ ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 600 ಅಂಕಗಳ ಪರೀಕ್ಷೆ ನಡೆಯಲಿದ್ದು, ಕನಿಷ್ಠ 35 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ. ಕಲ್ಯಾಣ ಕರ್ನಾಟಕ, ಗ್ರಾಮೀಣ, ಕನ್ನಡ ಮಾಧ್ಯಮ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ಮೀಸಲಾತಿ ಕಲ್ಪಿಸಲಾಗಿದೆ.

ವೇತನ ಎಷ್ಟು? ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗೆ ₹69,950–₹1,34,200 ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳ ಹುದ್ದೆಗೆ ₹65,950–₹1,24,900 ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹2,750, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ₹500 ನಿಗದಿಪಡಿಸಲಾಗಿದೆ. ಆಸಕ್ತರು ಕೊನೆಯ ದಿನದವರೆಗೆ ಕಾಯದೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Recruitment for 85 posts in the Horticulture Department; August 30 is the last date to submit applications – ತುಳುಟೈಮ್ಸ್

ಇದನ್ನೂ ಓದಿ :ಮನೋವಿಜ್ಞಾನ : ಮಕ್ಕಳು ಸ್ವತಂತ್ರರಾದರೂ ಪೋಷಕರ ‘ಅತಿಯಾದ ಸಹಾಯ’ ಏಕೆ ನಿಲ್ಲುವುದಿಲ್ಲ?

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 221

You cannot copy content of this page