ಬ್ರೇಕಿಂಗ್ ನ್ಯೂಸ್
ಕರ್ನಾಟಕ

‘ಮಂಗಳ ಗೌರಿ ಮದುವೆ’ ಖ್ಯಾತಿಯ ಹಿರಿಯ ನಟ ನಿಧನ

ಸಿನೆಮಾ‌ : Tulu Times l ಕನ್ನಡ ಕಿರುತೆರೆ ಹಾಗೂ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ನಟ ವಿಜಯಕುಮಾರ್ ಜಿತೂರಿ ಅವರು ನಿಧನರಾಗಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ತಮ್ಮ ಹುಟ್ಟೂರಿನಲ್ಲಿ ಅವರು ಕೊನೆಯುಸಿರೆಳೆದಿದ್ದು, ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ಸುದ್ದಿ ಕನ್ನಡ ಕಿರುತೆರೆ ಹಾಗೂ ಕಲಾಲೋಕಕ್ಕೆ ಆಘಾತವನ್ನುಂಟು ಮಾಡಿದೆ. ವಿಜಯಕುಮಾರ್ ಜಿತೂರಿ ಅವರು ಕಿರುತೆರೆ ಮಾತ್ರವಲ್ಲದೆ ಹಿರಿತೆರೆ ಹಾಗೂ ರಂಗಭೂಮಿ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ಜನಪ್ರಿಯ ‘ಮಂಗಳ ಗೌರಿ ಮದುವೆ’ ಧಾರಾವಾಹಿಯಲ್ಲಿ ಕಾನ್‌ಸ್ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡು ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದ್ದರು. ಧಾರಾವಾಹಿಯಲ್ಲಿ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ನಟನೆ ಜೊತೆಗೆ ಅವರು ಗಾಯಕರಾಗಿಯೂ ಗುರುತಿಸಿಕೊಂಡಿದ್ದರು. ಹಲವು ವರ್ಷಗಳಿಂದ ಕಲಾ ಕ್ಷೇತ್ರದೊಂದಿಗೆ ನಂಟು ಹೊಂದಿದ್ದ ಅವರು ತಮ್ಮ ಪ್ರತಿಭೆಯ ಮೂಲಕ ಕನ್ನಡ ಮನರಂಜನಾ ಲೋಕಕ್ಕೆ ಕೊಡುಗೆ ನೀಡಿದ್ದಾರೆ. ರಂಗಭೂಮಿಯಲ್ಲಿಯೂ ವಿವಿಧ ಪಾತ್ರಗಳನ್ನು ನಿರ್ವಹಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ನಟನಾ ಅವಕಾಶಗಳು ದೊರೆಯದ ಕಾರಣ ಆರ್ಥಿಕ ಸಂಕಷ್ಟವನ್ನೂ ಎದುರಿಸಿದ್ದರು ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹುಟ್ಟೂರಿಗೆ ಮರಳಿದ್ದರು ಎನ್ನಲಾಗಿದೆ. ಅನಾರೋಗ್ಯದ ನಡುವೆಯೂ ಕಲೆಯ ಮೇಲಿನ ತಮ್ಮ ಆಸಕ್ತಿಯನ್ನು ಮುಂದುವರಿಸಿಕೊಂಡಿದ್ದ ವಿಜಯಕುಮಾರ್ ಜಿತೂರಿ ಅವರ ನಿಧನದಿಂದ ಕನ್ನಡ ಕಿರುತೆರೆ, ರಂಗಭೂಮಿ ಹಾಗೂ ಕಲಾಲೋಕ ಮತ್ತೊಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತಾಗಿದೆ.

Veteran actor famous for ‘Mangala Gowri Maduve’ passes away – ತುಳುಟೈಮ್ಸ್

ಇದನ್ನೂ ಓದಿ :ಹಾಲಿನ ಜೊತೆಗೆ ಗೋಮೂತ್ರಕ್ಕೂ ಆದಾಯ; ರೈತರಿಗೆ ಸರ್ಕಾರದ ಹೊಸ ಆಫರ್!

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 221

You cannot copy content of this page