ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಬಲಿ

ಚಾಮರಾಜನಗರ: Tulu Times l ಜಿಲ್ಲೆಯ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಪ್ರಾಣಿ ಬೇಟೆಯಾಡುತ್ತಿದ್ದ ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆ ಬಳಿಕ ಮೃತರ ಸಂಬಂಧಿಕರು ಆಕ್ರೋಶಗೊಂಡು ಅರಣ್ಯ ಇಲಾಖೆಯ DRFO ಕಚೇರಿಯನ್ನು ಧ್ವಂಸಗೊಳಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.

ಮೂವರು ಕಾಡುಪ್ರಾಣಿ ಬೇಟೆಗಾರರು ಗುಂಡೇಟಿಗೆ ಬಲಿ ;

ಮಾಹಿತಿಯ ಪ್ರಕಾರ, ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಕೆಲವರು ಕಾಡುಪ್ರಾಣಿಗಳನ್ನು ಬೇಟೆಯಾಡಿ, ಮಾಂಸವನ್ನು ಬೇರ್ಪಡಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿಯ ಮೇಲೆ ಶಂಕಿತ ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಅರಣ್ಯ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ಮೂವರು ಕಾಡುಪ್ರಾಣಿ ಬೇಟೆಗಾರರು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರೋಶಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಕಚೇರಿಗೆ ತೆರಳಿದ ಗುಂಪು, ಕಚೇರಿಯಲ್ಲಿದ್ದ ಪೀಠೋಪಕರಣ ಹಾಗೂ ಇತರ ವಸ್ತುಗಳನ್ನು ಧ್ವಂಸಗೊಳಿಸಿದೆ ಎಂದು ವರದಿಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Process to purchase 15,000 new buses set in motion: Transport Minister Byrathi Suresh

ಗುಂಡಿನ ಚಕಮಕಿ ನಡೆದ ಸಂದರ್ಭಗಳ ಕುರಿತು ತನಿಖೆ ;

ಘಟನೆಯ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಚೇರಿ ಧ್ವಂಸ ಪ್ರಕರಣದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಶಸ್ತ್ರಾಸ್ತ್ರಗಳು ಹಾಗೂ ಬೇಟೆಗೆ ಬಳಸಲಾಗಿದ್ದ ಇತರ ವಸ್ತುಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತಪಟ್ಟವರ ಗುರುತು ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅರಣ್ಯ ಸಿಬ್ಬಂದಿಯ ಮೇಲಿನ ದಾಳಿ ಹಾಗೂ ಬಳಿಕ ನಡೆದ ಕಚೇರಿ ಧ್ವಂಸ ಪ್ರಕರಣ ಎರಡನ್ನೂ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಘಟನೆಯ ನಿಖರ ಕಾರಣ ಮತ್ತು ಗುಂಡಿನ ಚಕಮಕಿ ನಡೆದ ಸಂದರ್ಭಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Forest staff open fire on poachers; three killed. – ತುಳು ಟೈಮ್ಸ್

ಇದನ್ನೂ ಓದಿ : 15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಸಾರಿಗೆ ಸಚಿವ ಬೈರತಿ ಸುರೇಶ್

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/5C4rFNGDf_w

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 220

You cannot copy content of this page