ಸುಳ್ಯ: Tulu Times l ಯುವಜನ ಸಂಯುಕ್ತ ಮಂಡಳಿ ರಿ., ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ ರಿ., ಅಡ್ತಲೆ ಹಾಗೂ ಚಂದನ ಯುವತಿ ಮಂಡಲ ರಿ., ಅಡ್ತಲೆ ಇವರ ವತಿಯಿಂದ ಅಡ್ತಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಹಿತ್ ಮೇಲಡ್ತಲೆ ವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರೂ ಹಾಗೂ ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ, ಚಂದನ ಯುವತಿ ಮಂಡಲದ ಅಧ್ಯಕ್ಷೆ ಸರಸ್ವತಿ ಅಡ್ತಲೆ, ಶಾಲಾ ಮುಖ್ಯೋಪಾಧ್ಯಾಯ ಮುಕುಂದ ಡಿ., ನಿವೃತ್ತ ಶಿಕ್ಷಕ ಗಣೇಶ್ ಮಾಸ್ತರ್ ಅಡ್ತಲೆ, ದತ್ತಿನಿಧಿ ನೀಡಿದ ಶಾಲಾ ಹಿರಿಯ ವಿದ್ಯಾರ್ಥಿನಿ ವಿಶಾಲಾಕ್ಷಿ ಹಾಗೂ ಸ್ಪಂದನ ಗೆಳೆಯರ ಬಳಗದ ಕಾರ್ಯದರ್ಶಿ ಸಂತೋಷ್ ಪಿಂಡಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ವಿಜೇತರಾದವರಿಗೆ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಶಾಲೆಯ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ ವಿವಿಧ ದತ್ತಿನಿಧಿಗಳನ್ನು ವಿತರಿಸಲಾಯಿತು. ದತ್ತಿನಿಧಿ ನೀಡಿದ ಹಿರಿಯ ವಿದ್ಯಾರ್ಥಿನಿ ವಿಶಾಲಾಕ್ಷಿ ಅವರ ಸೇವೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದ ಮತ್ತೊಂದು ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ದೇಶಭಕ್ತಿ ಗೀತೆಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ, ಪೋಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಸ್ಪಂದನ ಗೆಳೆಯರ ಬಳಗದ ಸದಸ್ಯರು ಹಾಗೂ ಚಂದನ ಯುವತಿ ಮಂಡಲದ ಸದಸ್ಯರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವ ಪ್ರಯತ್ನ ನಡೆಯಿತು. ಯುವಜನ ಸಂಘಟನೆಗಳು ಹಾಗೂ ಸ್ಥಳೀಯ ಸಮುದಾಯದ ಸಹಕಾರದಿಂದ ಶಾಲೆಯಲ್ಲಿ ನಡೆದ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.
80th Independence Day Celebration at Adtale Government School – ತುಳು ಟೈಮ್ಸ್
ಇದನ್ನೂ ಓದಿ : ಸುಳ್ಯ : ಮಹಿಳೆಯರೇ ಗಮನಿಸಿ, ಸುಳ್ಯದಲ್ಲಿ ಶುರುವಾಗಿದೆ ಸೀರೆಗಳ ಹಬ್ಬ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/5C4rFNGDf_w











