ಬ್ರೇಕಿಂಗ್ ನ್ಯೂಸ್
ಕರಾವಳಿ

ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಸರಿದೂಗಿಸಲು ಸೆಪ್ಟೆಂಬರ್‌ನಿಂದ ಶನಿವಾರ ತರಗತಿ

ಮಂಗಳೂರು: Tulu Times l ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಘೋಷಿಸಿದ್ದ ಮಳೆ ರಜೆಗಳಿಂದ ಉಂಟಾಗಿರುವ ಬೋಧನಾ ಅವಧಿಯ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ತಿದ್ದುಪಡಿ ಆದೇಶ ಹೊರಡಿಸಿದೆ. ಈ ಹಿಂದೆ ಹೊರಡಿಸಲಾಗಿದ್ದ ಜ್ಞಾಪನೆಯಲ್ಲಿ ಮಳೆ ರಜೆಗಳಿಂದ ಉಂಟಾದ ಬೋಧನಾ ಅವಧಿಯ ಕೊರತೆಯನ್ನು ಆಗಸ್ಟ್ ತಿಂಗಳ ಮೂರನೇ ವಾರದಿಂದ ಸರಿದೂಗಿಸುವಂತೆ ಸೂಚಿಸಲಾಗಿತ್ತು. ಇದೀಗ ಈ ಸೂಚನೆಯಲ್ಲಿ ತಿದ್ದುಪಡಿ ಮಾಡಲಾಗಿದ್ದು, ಸೆಪ್ಟೆಂಬರ್ 2026ರ ಎರಡನೇ ಶನಿವಾರದಿಂದ ಕೊರತೆಯಾಗಿರುವ ಬೋಧನಾ ಅವಧಿಗಳನ್ನು ಸರಿದೂಗಿಸುವಂತೆ ತಿಳಿಸಲಾಗಿದೆ.

ಹೆಚ್ಚುವರಿ ತರಗತಿಗಳ ಮೂಲಕ ಸರಿದೂಗಿಸುವ ಉದ್ದೇಶ ;

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಮಂಗಳೂರು ವತಿಯಿಂದ ಆಗಸ್ಟ್ 21ರಂದು ಈ ಸಂಬಂಧ ತಿದ್ದುಪಡಿ ಜ್ಞಾಪನ ಹೊರಡಿಸಲಾಗಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಈ ಆದೇಶವನ್ನು ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ವಿವಿಧ ದಿನಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳ ನಿಗದಿತ ಪಠ್ಯ ಬೋಧನಾ ಅವಧಿಯಲ್ಲಿ ಕೊರತೆ ಉಂಟಾಗಿದೆ. ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರದಂತೆ ಈ ಕೊರತೆಯನ್ನು ಹೆಚ್ಚುವರಿ ತರಗತಿಗಳ ಮೂಲಕ ಸರಿದೂಗಿಸುವ ಉದ್ದೇಶದಿಂದ ಇಲಾಖೆ ಕ್ರಮ ಕೈಗೊಂಡಿದೆ.

Process to purchase 15,000 new buses set in motion: Transport Minister Byrathi Suresh
Credit to original source

ತಿದ್ದುಪಡಿ ಆದೇಶದ ಪ್ರಕಾರ, ಸೆಪ್ಟೆಂಬರ್ 2026ರ ಎರಡನೇ ಶನಿವಾರದಿಂದ ಅಗತ್ಯವಿರುವ ಶನಿವಾರಗಳಲ್ಲಿ ತರಗತಿಗಳನ್ನು ನಡೆಸಿ ಬೋಧನಾ ಅವಧಿಯನ್ನು ಪೂರ್ಣಗೊಳಿಸಬೇಕಾಗಿದೆ. ಈ ಕುರಿತು ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ಆದೇಶದ ಪ್ರತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಿಕ್ಷಕರ ಸಂಘಗಳ ಜಿಲ್ಲಾ ಘಟಕಗಳಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕ್ಕಾಗಿ ಕಳುಹಿಸಲಾಗಿದೆ. ಮಳೆ ರಜೆಗಳನ್ನು ಸರಿದೂಗಿಸುವ ಈ ಕ್ರಮದಿಂದ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸುವಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಇಲಾಖೆ ಮುಂದಾಗಿದೆ.

Saturday classes to be held from September in Dakshina Kannada to make up for rain-related holidays. – ತುಳು ಟೈಮ್ಸ್

ಇದನ್ನೂ ಓದಿ : ಮೂಗಿನಿಂದ ಏಕಾಏಕಿ ರಕ್ತ ಬರುತ್ತಿದೆಯೇ? ನಿರ್ಲಕ್ಷಿಸಬೇಡಿ, ಕಾರಣ ತಿಳಿಯಿರಿ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/5C4rFNGDf_w

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 32

You cannot copy content of this page