ಸುಳ್ಯ : Tulu Times l ಸುಳ್ಯ’ಪಿಎಂಶ್ರೀ ”ಕೆ.ಪಿ.ಎಸ್. ‘ಶಾಲೆಯಲ್ಲಿ ವಿದ್ಯಾರ್ಥಿಗಳೇ ಮುತುವರ್ಜಿ ವಹಿಸಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಶಿಕ್ಷಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಪಾರೆಪ್ಪಾ ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳು, ಶಿಕ್ಷಕರ ಸೇವೆ ಹಾಗೂ ಮಾರ್ಗದರ್ಶನದ ಮಹತ್ವವನ್ನು ಸ್ಮರಿಸಿದರು. ವಿದ್ಯಾರ್ಥಿಗಳ, ಶಿಕ್ಷಕ ರೊಂದಿಗಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಯೇ ಶಿಕ್ಷಕರ ದಿನಾಚರಣೆ ವಿಶೇಷವಾಗಿತ್ತು.

ಶಿಕ್ಷಕರಿಗಾಗಿ ವಿವಿಧ ಮನರಂಜನಾ ಆಟಗಳನ್ನು ವಿದ್ಯಾರ್ಥಿಗಳೇ ಆಯೋಜಿಸಿದ್ದರು. ಶಿಕ್ಷಕರು ಉತ್ಸಾಹದಿಂದ ಆಟಗಳಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಆಟಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಆತ್ಮೀಯತೆ ಹೆಚ್ಚುವಂತೆ ಮಾಡಿತು.
ಇದೇ ವೇಳೆ, ವಿದ್ಯಾರ್ಥಿಗಳೇ ಸ್ವತಃ ತಯಾರಿಸಿ ತಂದಿದ್ದ ವಿಶೇಷ ಉಡುಗೊರೆಗಳನ್ನು ಶಿಕ್ಷಕರಿಗೆ ಹಸ್ತಾಂತರಿಸಿದರು . ತಮ್ಮ ಕೈಯಾರೆ ಸಿದ್ಧಪಡಿಸಿದ ಉಡುಗೊರೆಗಳನ್ನು ಶಿಕ್ಷಕರಿಗೆ ನೀಡಿ ವಿದ್ಯಾರ್ಥಿಗಳು ಕೃತಜ್ಞತೆ ಹಾಗೂ ಗೌರವವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಈ ವಿಶೇಷ ಪ್ರೀತಿಗೆ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ಮತ್ತೊಂದು ಪ್ರಮುಖ ಆಕರ್ಷಣೆ, ವಿದ್ಯಾರ್ಥಿಗಳು ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿ ಉತ್ಸಾಹದಿಂದ ನೃತ್ಯ ಮಾಡಿ ಮನ ರಂಜಿಸಿದರು.
ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ಶಿಕ್ಷಕರ ಮೇಲಿನ ಗೌರವವನ್ನು ಬಿಂಬಿಸಿದ ಶಿಕ್ಷಕರ ದಿನಾಚರಣೆ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು. ಶಿಕ್ಷಕರಿಗೆ ಮೀಸಲಿಟ್ಟ ಈ ದಿನ ಸಾರ್ಥಕತೆಯನ್ನು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಪೋಷಕರು, ಅಡುಗೆ ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
Joyful Teachers’ Day Celebration at Sullia PM SHRI ‘KPS’ – ತುಳುಟೈಮ್ಸ್
ಇದನ್ನೂ ಓದಿ :ಮೊಸರಿಗೆ ಸಕ್ಕರೆ ಬೆರೆಸಿ ಸೇವಿಸುವುದರಿಂದ ಆರೋಗ್ಯಕ್ಕೆ ಲಾಭವಿದೆಯೇ?
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/GzXRNLIiLws?feature=share











