ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ : ಕೆವಿಜಿ ಅಮರಜ್ಯೋತಿಯ ಫುಟ್ಬಾಲ್ ತಂಡಕ್ಕೆ ಭರ್ಜರಿ ಯಶಸ್ಸು

ಸುಳ್ಯ: Tulu Times l ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಬಾಲಕರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ತಾಲೂಕು ಮಟ್ಟದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ ಉತ್ತಮ ಆಟದ ಫಲವಾಗಿ ಕಾಲೇಜಿನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಕಾಲೇಜಿನ ಮಹಮ್ಮದ್ ನಿಯಾಜ್, ಅಹಮ್ಮದ್ ಮಹಶೂಕ್, ಅಬ್ದುಲ್ ರಿಫಾತ್ ಹಾಗೂ ಅಜಯ್ ಕೆ.ಸಿ. ಅವರು ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ತಾಲೂಕು ಮಟ್ಟದ ಪಂದ್ಯದಲ್ಲಿ ಮಹಮ್ಮದ್ ನಿಯಾಜ್ ಅವರು ಅತ್ಯುತ್ತಮ ಆಟ ಪ್ರದರ್ಶಿಸಿ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಗಮನಾರ್ಹ ಪ್ರದರ್ಶನ ತಂಡದ ಯಶಸ್ಸಿಗೆ ಪ್ರಮುಖ ಕೊಡುಗೆ ನೀಡಿದೆ.

ಕ್ರೀಡೆಯ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಉತ್ತೇಜನ ನೀಡುತ್ತಿರುವ ಕಾಲೇಜಿನ ಈ ಸಾಧನೆಗೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಪರಿಶ್ರಮ, ಕ್ರೀಡಾ ಪ್ರತಿಭೆ ಹಾಗೂ ತಂಡದ ಒಗ್ಗಟ್ಟಿನ ಮನೋಭಾವವನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಶ್ಲಾಘಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಸುಳ್ಯ ತಾಲೂಕು ಹಾಗೂ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ನಾಲ್ವರು ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿಯೂ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಉತ್ತಮ ಫಲಿತಾಂಶ ಸಾಧಿಸುವ ನಿರೀಕ್ಷೆ ಮೂಡಿಸಿದ್ದಾರೆ.

Sulya: Huge success for KVG Amarajyoti’s football team – ತುಳು ಟೈಮ್ಸ್

ಇದನ್ನೂ ಓದಿ : ಮುಖದ ಮೇಲೆ ಬೇಡದ ಕೂದಲು ಇದೆಯೇ? ಈ ಮನೆಮದ್ದುಗಳ ಬಗ್ಗೆ ತಿಳಿಯಿರಿ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/5C4rFNGDf_w

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page