ಬ್ರೇಕಿಂಗ್ ನ್ಯೂಸ್
ಕರ್ನಾಟಕಸುಳ್ಯ

Madikeri: ಅಬ್ಬಬ್ಬಾ ಅಪಾಯವನ್ನು ಆಹ್ವಾನಿಸುತ್ತಿದೆ ಮರಳಿನ ತಡೆಗೋಡೆ; ಬ್ಯಾರಿಕೇಡ್ ಅಳವಡಿಸಲು ಒತ್ತಾಯ..!

Madikeri: ಮಡಿಕೇರಿ ನಗರದಿಂದ ವಿರಾಜಪೇಟೆಗೆ ತೆರಳುವ ರಸ್ತೆಯಲ್ಲಿ ಮೂರನೇ ಮೈಲು ಭಾಗದಲ್ಲಿ ಮರಳಿನ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಬ್ಯಾರಿಕೇಡ್ ಅಳವಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾರವಾರ ಸಮುದ್ರ ತೀರಕ್ಕೆ ಬಂತು ಲಕ್ಷಾಂತರ ಮೀನುಗಳು..! ಜನ ಶಾಕ್‌!!

ಡೇಂಜರಸ್‌ ರಸ್ತೆ ತಿರುವಿನಲ್ಲಿ ವಾಹನ ಓಡಾಟ!

ಸ್ಥಳಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯ ಸ್ಥಿತಿಗತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದ ರಸ್ತೆ ಕುಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮರಳಿನ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಆದರೆ ಈ ಅಪಾಯಕಾರಿ ತಿರುವಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕಿರಿದಾದ ರಸ್ತೆಯಲ್ಲಿ ಸಾಗುವ ವಾಹನಗಳು ನಿಯಂತ್ರಣ ತಪ್ಪಿ ಉರುಳುವ ಸಾಧ್ಯತೆ ಇದೆ. ರಾತ್ರಿ ವೇಳೆ ಮತ್ತು ದಟ್ಟ ಮಂಜು ಕವಿದ ವಾತಾವರಣದಲ್ಲಿ ಅಪಾಯ ಎದುರಾಗಬಹುದು. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕ ಕ್ರಮವಾಗಿ ತುರ್ತಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸರ್ಕಾರಕ್ಕೆ ರೈತರ ಪರ ಕಾಳಜಿಯಿಲ್ಲ : ಕಬ್ಬಿನ ಬೆಲೆ ನಿಗದಿಗಾಗಿ‌ ಮುಗಿಲು ಮುಟ್ಟಿದ ರೈತರ ಆಕ್ರೋಶ

ಮಡಿಕೇರಿ ರಸ್ತೆಗಳ ಸ್ಥಿತಿ ಕೇಳಂಗಿಲ್ಲ..! ಹೇಳಂಗಿಲ್ಲ..!

ಈಗಾಗಲೇ ಮಳೆ ಸಂಪೂರ್ಣವಾಗಿ ನಿಂತು ಹೋಗಿದ್ದು, ತಕ್ಷಣ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಬೇಕು. ತಡೆಗೋಡೆ ಶಾಶ್ವತ ಪರಿಹಾರವಾಗುವುದರಿಂದ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಈ ಬಗ್ಗೆ ಜಿಲ್ಲೆಯ ಶಾಸಕರುಗಳು ಆಸಕ್ತಿ ತೋರಬೇಕು. ಕೊಡಗಿನ ಬಹುತೇಕ ಭಾಗಗಳಲ್ಲಿ ಮಳೆಯಿಂದ ರಸ್ತೆಗಳು ಹದಗೆಟ್ಟಿವೆ ಮತ್ತು ಬರೆಗಳು ಕುಸಿದಿವೆ. ಜಿಲ್ಲೆಯಲ್ಲಿ ಮಳೆಗಾಲ ಮುಗಿದಿದ್ದು, ಬಿಸಿಲಿನ ವಾತಾವರಣ ಮೂಡಿದೆ. ಇನ್ನಾದರು ರಸ್ತೆಗಳ ಅಭಿವೃದ್ಧಿ ಮತ್ತು ತಡೆಗೋಡೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದರು. ಸಾಮಾನ್ಯವಾಗಿ ಮಳೆ ಹೆಚ್ಚಾಗಿ ಬರುವ ಸ್ಥಳ ಮಡಿಕೇರಿ ಹೀಗಾಗಿ ಇಂತಹ ಸ್ಥಳದಲ್ಲಿ ರಸ್ತೆಗಳಲ್ಲಿ ಪ್ರತೀ ದಿನ ವಾಹನಗಳು ಓಡಾಡೋಕೆ ಭಯ ಪಡುವಂತಹ ಪರಿಸ್ಥಿತಿ ಉಂಟಾಗಿದ್ದು,  ಪ್ರವಾಸಿಗರೂ ಭಯಪಡುವಂತಹ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: ಪಬ್ಲಿಕ್‌ನಲ್ಲಿ ಸಾಕು ನಾಯಿ ಬಿಟ್ಟವರ ವಿರುದ್ಧ ಕಾನೂನು ಕ್ರಮ

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page