ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

B. Y. Vijayendra: ಅಧಿಕಾರದ ಮದದಿಂದ ರಾಜ್ಯ ಸರ್ಕಾರ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ..!

B. Y. Vijayendra: ಈ ಹಿಂದೆ ಯಾವುದೇ ರಾಜ್ಯ ಸರಕಾರಗಳು ರೈತರ ಹೋರಾಟದ ವಿಚಾರದಲ್ಲಿ ಇಷ್ಟೊಂದು ಕೆಟ್ಟದಾಗಿ ನಡೆದುಕೊಂಡಿರಲಿಲ್ಲ. ಸರಕಾರಕ್ಕೆ ಅಧಿಕಾರದ ಮದ ಏರಿದ್ದು, ಆದರಿಂದ ಈ ರೀತಿ ಮಾಡುತ್ತಿರುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ..!

ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥರನ್ನು ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದರು. ಬಳಿಕ ವಿಜಯೇಂದ್ರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಇದನ್ನೂ ಓದಿ : ಆರಾಮದಾಯಕ ನಿದ್ರೆ‌ ನಿಮ್ಮದಾಗಬೇಕಾದರೆ ಹೀಗೆ ಮಾಡಿ…!

ಕಬ್ಬು ಬೆಳೆಗಾರರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆ ಕುಟುಂಬದ ಕುರಿತು ಗಮನಿಸಬೇಕು ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರವು ಕಬ್ಬು ಬೆಳೆಗಾರರ ವಿಚಾರದಲ್ಲಿ ಸರಕಾರವು ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ವರ್ತಿಸುತ್ತಿತ್ತು. ಇದನ್ನು ಗಮನಿಸಿ ನಾನು ಮತ್ತು ಪಕ್ಷದ ನಾಯಕರು ಹೋರಾಟದಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ಇದನ್ನೂ ಓದಿ: ಅಪ್ರಾಪ್ತ ಮಗನ ದ್ವಿಚಕ್ರ ಚಾಲನೆ – ತಾಯಿಗೆ ಭಾರೀ ದಂಡ

ನಿನ್ನೆ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ಇವತ್ತು ಕೂಡ ಹೋರಾಟದಲ್ಲಿ ಭಾಗವಹಿಸಿದ್ದೇವೆ. ಈ ಮೂಲಕ ಧೈರ್ಯ ತುಂಬಿಸಲು ಪ್ರಯತ್ನಿಸಿದ್ದಾಗಿ ವಿವರಿಸಿದರು. ಹೆಚ್ಚಿನ ಪ್ರಚಾರ ನೀಡಿದ ಮಾಧ್ಯಮಗಳನ್ನು ಅವರು ಅಭಿನಂದಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಹಾಗೂ ಮುಖಂಡರು, ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಐಸ್ ಯು ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸರನ್ನು ಭೇಟಿ ಮಾಡಿದರು. ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್‌ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : ನವೆಂಬರ್ 7 ಕ್ಕೆ ಮರುಬಿಡುಗಡೆಯಾಗಲಿದೆ ‘ಯಜಮಾನ’ : ಹೊಸ ತಂತ್ರಜ್ಞಾನದೊಂದಿಗೆ ಸಾಹಸ ಸಿಂಹ ವಿಷ್ಣುವರ್ಧನ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page