ಬ್ರೇಕಿಂಗ್ ನ್ಯೂಸ್
ಕರ್ನಾಟಕಸುಳ್ಯ

Somawarpet: ದಯವಿಟ್ಟು ಗಮನಿಸಿ.. ಇಂದು ಎಲ್ಲೆಲ್ಲಿ ಕರೆಂಟ್‌ ಇರಲ್ಲ..?

Somawarpet: ಸೋಮವಾರಪೇಟೆಯ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಹಾಗೂ ಎಫ್4 ಸೋಮವಾರಪೇಟೆ ಫೀಡರ್‍ನಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಹೊಸ ಲೈನ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹಾನಗಲ್ಲು, ಶೆಟ್ಟಳ್ಳಿ, ಹಾನಗಲ್ಲು ಬಾಣೆ, ತೋಳೂರು ಶೆಟ್ಟಳ್ಳಿ, ಕೂತಿ ಯಡೂರು, ತಾಕೇರಿ, ಕಿರಂಗಂದೂರು, ಹರಗ, ಶಾಂತಳ್ಳಿ, ಬೆಟ್ಟದಳ್ಳಿ, ನಾಗರಳ್ಳಿ, ಕುಂದಳ್ಳಿ, ಕಿಕ್ಕರಳ್ಳಿ, ಕುಡಿಗಾಣ, ಕೊತ್ನಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಇದನ್ನೂ ಓದಿ: ಸಾರಿಗೆ ಸಚಿವರನ್ನು ಭೇಟಿ ಮಾಡಿ ಕೂರ್ಗ್ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ ಎ.ಎಸ್ ಪೊನ್ನಣ್ಣ

ಇಂದು ವಿರಾಜಪೇಟೆಯಲ್ಲೂ ವಿದ್ಯುತ್ ವ್ಯತ್ಯಯ..!
ವಿರಾಜಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಪಂಜರಪೇಟೆ ಹಾಗೂ ಹೆಗ್ಗಳ ಫೀಡರ್‍ಗಳಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ನೆಹರು ನಗರ, ಗೋಣಿಕೊಪ್ಪ ರಸ್ತೆ, ಶಾಂತಿ ನಗರ, ವಿದ್ಯಾನಗರ, ನಿಸರ್ಗ ಬಡಾವಣೆ, ಮೀನುಪೇಟೆ, ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್ಜಿ, ಬೇಟೋಳಿ, ಕಲ್ಲುಬಾಣೆ, ಹೆಗ್ಗಳ, ರಾಮನಗರ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಇನ್ನು ನಗರದಲ್ಲಿ ಪ್ರತ್ಯೇಕವಾಗಿ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ವಿವಿಧ ಇಲಾಖೆಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾರ್ಯಕ್ರಮಗಳನ್ನು ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ವೆಂಕಟ್ ರಾಜಾ ಸೂಚಿಸಿದರು.

ಇದನ್ನೂ ಓದಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ ನೋಡಿ…!

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 126

You cannot copy content of this page