Kambala ಪ್ರೇಮಿ, ಯುವ ಉದ್ಯಮಿ ಅಭಿಷೇಕ್ ಆಳ್ವರ ಅವರ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ನ.7ರ ಶುಕ್ರವಾರದಂದು ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ಇದೆ ಎಂದು ಹೇಳಲಾಗಿದೆ.
ಮೃತರು ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ. ನ. 5ರ ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಅಭಿಷೇಕ್ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.
ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ ಕಾರಣರಾಗಿದ್ದರು.
ಇದನ್ನೂ ಓದಿ: Katrina Kaif: ಗಂಡು ಮಗುವಿಗೆ ತಾಯಿಯಾದ ಬಾಲಿವುಡ್ ನಟಿ ಕತ್ರಿನಾ ಕೈಫ್..!
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











