ಬ್ರೇಕಿಂಗ್ ನ್ಯೂಸ್
ಕರ್ನಾಟಕ

Mysore : ಹುಲಿ ಸೆರೆ ಕಾರ್ಯಚಾರಣೆಗೆ ಸೂಚನೆ : ಸಫಾರಿ, ಚಾರಣ ಇಂದಿನಿಂದ ಬಂದ್ : ಈಶ್ವರ ಖಂಡ್ರೆ

Mysore : ಮೈಸೂರಿನತ್ತ ಪ್ರವಾಸ ತೆರಳುತ್ತಿರುವವರಿಗೆ ಅದರಲ್ಲೂ, ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅಲ್ಲದೇ, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಹುಲಿ ದಾಳಿಯ ನಂತರ ಅ. 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಇದ್ದು, ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : Kambala ಪ್ರೇಮಿ, ಯುವ ಉದ್ಯಮಿ ಅಭಿಷೇಕ್‌ ಆಳ್ವ ಆತ್ಮಹತ್ಯೆ

………

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/2NUxdpIvL2A?si=fWmoMsoNw25i7mH_

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page