ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕ

Karnataka Weather: ಬಹುತೇಕ ಕಡೆ ಇಬ್ಬನಿ..ಒಣಹವೆ ವಾತಾವರಣ..!

Karnataka Weather: ರಾಜ್ಯದ ಬಹುತೇಕ ಕಡೆ ಮಳೆ ಕಡಿಮೆಯಾಗಿದ್ದು, ಅಲ್ಲಲ್ಲಿ ಇಬ್ಬನಿ ಬೀಳುತ್ತಿದ್ದು, ಚಳಿಯ ವಾತಾವರಣ ಶುರುವಾಗಿದೆ.

12 ಜಿಲ್ಲೆಗಳಲ್ಲಿ ಸಾಧಾರಣ ಮಳೆ..!

ಕರ್ನಾಟಕದ ಬಹುತೇಕ ಕಡೆಗಳಲ್ಲಿ 12 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ. ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್​ಎಎಲ್​, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.

ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದ್ದು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 17.8 ಡಿಗ್ರಿ ಸೆಲ್ಸಿಯಸ್  ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಎಚ್​ಎಎಲ್​ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ ದಾಖಲಾಗಿದೆ..?

ಹೊನ್ನಾವರದಲ್ಲಿ 18.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 169

You cannot copy content of this page