Belthangady: ಕಳ್ಳತನ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬೆಳ್ತಂಗಡಿಯ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವಿಗೆ ಯತ್ನಿಸುತ್ತಿದ್ದಾಗ ನೆರೆ ಮನೆಯವರು ಗಮನಿಸಿದ್ದಾರೆ.
ಕೂಡಲೇ ಸೇರಿದ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678
ಇದನ್ನೂ ಓದಿ: Mahanati : ‘ಮಹಾನಟಿ ಸೀಸನ್ – 2’ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ ರತ್ನಕುಮಾರ್
=====================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











