ಮಂಗಳೂರು : ಕರ್ನಾಟಕದಲ್ಲಿ ಸರಕಾರಿ ಉದ್ಯೋಗ ಪಡೆಯ ಬೇಕಾದ್ರೆ ಕಡ್ಡಾಯವಾಗಿ ಕನ್ನಡ ಗೊತ್ತಿರಲೇ ಬೇಕು. ಆದರೆ ರಾಜಕೀಯದ ಒತ್ತಡಕ್ಕೆ ಮಣಿದು ಮಂಗಳೂರಿನ ಮಹಾನಗರ ಪಾಲಿಕೆ (Mangaluru City Corporation Controversy) ಗೆ ಕನ್ನಡವೇ ಗೊತ್ತಿಲ್ಲದ, ಮಲಯಾಳಿ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಇದು ಬಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಇದೀಗ ವಿವಾದದ ಕೇಂದ್ರವಾಗಿದೆ. ಸಾಮಾನ್ಯವಾಗಿ ಕರ್ನಾಟಕದಲ್ಲಿ ಸರಕಾರಿ ಉದ್ಯೋಗ ಪಡೆಯಲು ಅಭ್ಯರ್ಥಿ ಕಡ್ಡಾಯವಾಗಿ ಎಸ್ಎಸ್ಎಲ್ಸಿ ಅಥವಾ 10ನೇ ತರಗತಿಯಲ್ಲಿ ಕಡ್ಡಾಯವಾಗಿ ಕನ್ನಡವನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.
ಆದರೆ ಕನ್ನಡ ಓದಲು ಹಾಗೂ ಬರೆಯಲು ಬಾರದ ಮಲಯಾಳಿ ಮಹಿಳೆಯನ್ನು ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕಾನೂನು ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾನೂನನ್ನೇ ಗಾಳಿಗೆ ತೂರಿ ಮಹಾನಗರ ಪಾಲಿಕೆಗೆ ಕಾನೂನು ಅಧಿಕಾರಿ ನೇಮಕ ಮಾಡಲಾಗಿದೆ.
ಭಾಷೆಯೇ ಗೊತ್ತಿಲ್ಲದ ಅಧಿಕಾರಿಯ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡವೇ ಗೊತ್ತಿಲ್ಲದ ಅಧಿಕಾರಿಯ ಜೊತೆಯಲ್ಲಿ ವ್ಯವಹಾರ ನಡೆಸೋದಕ್ಕೆ ಸಾಧ್ಯವೇ ಅಂತಾ ಪ್ರಶ್ನಿಸುತ್ತಿದ್ದಾರೆ. ಕಾನೂನು ಅಧಿಕಾರಿಯ ನೇಮಕಾತಿಯ ವಿರುದ್ದ ಮಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಅಕ್ರಮವಾಗಿ ಕಾನೂನು ಅಧಿಕಾರಿಯ ನೇಮಕ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿಬಂದಿದೆ. ಮಲಯಾಳಿ ಮಹಿಳೆಗೆ ಉದ್ಯೋಗ ನೀಡುವ ಮೂಲಕ ಸ್ಥಳೀಯರಿಗೆ ಅನ್ಯಾಯ ಎಸಗಲಾಗಿದೆ ಎಂದು ಮನಾಪ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಸರಕಾರ ಕಾನೂನು ಅಧಿಕಾರಿಯ ನೇಮಕಾತಿ ರದ್ದುಗೊಳಿಸಿ, ಸ್ಥಳೀಯರಿಗೆ ಆ ಹುದ್ದೆಯನ್ನು ಮೀಸಲಿಡಬೇಕು ಅನ್ನೋ ಆಗ್ರಹ ಕೇಳಿಬಂದಿದೆ. ಒಟ್ಟಿನಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದು ಅನ್ಯ ರಾಜ್ಯದವರಿಗೆ ಸರಕಾರಿ ಉದ್ಯೋಗ ನೀಡಿದ್ರೆ ಸ್ಥಳೀಯರ ಕಥೆ ಏನು ಅನ್ನೋ ಪ್ರಶ್ನೆಯು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.











