ಬ್ರೇಕಿಂಗ್ ನ್ಯೂಸ್
ಕ್ರೀಡೆದೇಶ

IPL 2026 Auction: ಐಪಿಎಲ್ ಮಿನಿ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ..!

IPL 2026 auction: ಐಪಿಎಲ್ ಮಿನಿ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ವಿಶ್ವಕಪ್ ಟಿ 20 – 2026ಕ್ಕೆ ನಿಗದಿಯಾಯ್ತು ದಿನ :‌ ಕ್ರಿಕೆಟ್ ಅಭಿಮಾನಿಗಳಿಗಿದು ಸಿಹಿ ಸುದ್ದಿ

ಡಿಸೆಂಬರ್ 15 ರಂದು ಮಿನಿ ಹರಾಜು..!

ಐಪಿಎಲ್ ಸೀಸನ್-19 ಕ್ಕಾಗಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಕಳೆದ ಬಾರಿ ಮೆಗಾ ಹರಾಜು ನಡೆಸಲಾಗಿದೆ, ಹೀಗಾಗಿ ಈ ಬಾರಿ ಮಿನಿ ಆಕ್ಷನ್  ಆಯೋಜಿಸಲಾಗುತ್ತದೆ. ಈ ಹರಾಜಿಗಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ ಎನ್ನಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗಾಗಿ ದಿನಾಂಕ  ಈಗಾಗಲೇ ನಿಗದಿಯಾಗಿದೆ.  ಮುಂದಿನ ತಿಂಗಳು ಡಿಸೆಂಬರ್ 15 ರಂದು ಮಿನಿ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಆದರೆ, ಈ ಹರಾಜು ಪ್ರಕೀಯೆ  ಎಲ್ಲಿ  ನಡೆಯುವುದು ಎಂಬುದನ್ನು ತಿಳಿದು ಬಂದಿಲ್ಲ.

ಕಳೆದ ಬಾರಿಯ ಮೆಗಾ ಹರಾಜನ್ನು ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿತ್ತು.  ರಿಯಾದ್ ನಗರದ ಪ್ರತಿಷ್ಠಿತ ಐಷಾರಾಮಿ ಹೋಟೆಲ್ ಆತಿಥ್ಯವಹಿಸಿತ್ತು. ಈ ಬಾರಿ ಮಿನಿ ಹರಾಜು ನಡೆಯುತ್ತಿರುವುದರಿಂದ  ಒಂದು ದಿನದಲ್ಲೇ ಆಕ್ಷನ್ ಪ್ರಕ್ರಿಯೆ ಮುಗಿಯಲಿದೆ ಎನ್ನಲಾಗಿದೆ. ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ನವೆಂಬರ್ 15 ರವರೆಗೆ ಗಡುವು ನೀಡಲಾಗಿದೆ.  ನವೆಂಬರ್ 15 ರಂದು 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ ಹೊರಬೀಳಲಿದೆ.

ಬಳಿಕ ಎಷ್ಟು ಸ್ಲಾಟ್​ಗಳಿಗೆ ಹರಾಜು ನಡೆಸಬೇಕಾಗುತ್ತದೆ ಎಂಬುದನ್ನು ನಿರ್ಧರಿಸಲಾಗುತ್ತದೆ. ಅಂದರೆ ಐಪಿಎಲ್ ನಿಯಮದ ಪ್ರಕಾರ ಪ್ರತಿ ಫ್ರಾಂಚೈಸಿಗಳು ಗರಿಷ್ಠ 25 ಆಟಗಾರರನ್ನು ಹೊಂದಬಹುದು. ಮಿನಿ ಹರಾಜಿಗೂ ಮುನ್ನ ಬಹುತೇಕ ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದರಿಂದ ಕಡಿಮೆ ಸ್ಲಾಟ್​ಗಳಿಗೆ ಹರಾಜು ನಡೆಯಲಿದೆ.

ಉದಾಹರಣೆಗೆ, 10 ಫ್ರಾಂಚೈಸಿಗಳು ಒಟ್ಟು 200 ಆಟಗಾರರನ್ನು ತಮ್ಮ ತಂಡಗಳಲ್ಲಿ ಉಳಿಸಿಕೊಂಡರೆ, ಉಳಿದ 50 ಸ್ಥಾನಗಳಿಗೆ ಮಾತ್ರ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಹರಾಜಿಗಾಗಿ ಆಟಗಾರರ ಹೆಸರು ನೊಂದಾಣಿ ಪ್ರಕ್ರಿಯೆ ಕೂಡ ನಡೆಯಲಿದ್ದು, ಆ ಬಳಿಕ ಆ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಈ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರುಗಳು ಮಾತ್ರ ಡಿಸೆಂಬರ್ 15 ರಂದು ನಡೆಯಲಿರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 17

You cannot copy content of this page