Vitla: ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾದ ಘಟನೆ ವಿಟ್ಲದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55) ಮೃತಪಟ್ಟ ವ್ಯಕ್ತಿ.
ಅಡಿಕೆ ಸಂಸ್ಕರಣಾ ಘಟಕ ಒಂದರಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ ಅವರು ನ. 9ರ ಭಾನುವಾರ ರಾತ್ರಿ ಕಾಣೆಯಾಗಿದ್ದರು. ಸೋಮವಾರ ಬೆಳಿಗ್ಗೆ, ಪಾದಚಾರಿಗಳು ಚರಂಡಿಯಲ್ಲಿ ಅವರ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.
ಮೃತರು ಮದ್ಯಪಾನ ವ್ಯಸನಿಯಾಗಿದ್ದು, ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದ ತಕ್ಷಣ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Actor Sudeep: ಸಿಂಪಲ್ ಸುನಿ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್..ಇದೇ 14ರಂದು ‘ಗತವೈಭವ’ ರಿಲೀಸ್
=================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











