ಬ್ರೇಕಿಂಗ್ ನ್ಯೂಸ್
ಕರ್ನಾಟಕ

Jail : ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ : ಕಠಿಣ ಕ್ರಮಗಳ ಜೊತೆ ಇಬ್ಬರ ಸಸ್ಪೆಂಡ್

Jail : ಪರಪ್ಪನ‌ ಅಗ್ರಹಾರದಲ್ಲಿ ಸುದ್ದಿ ಮಾಡುತ್ತಿರುವ ಖೈದಿಗಳ ವೀಡಿಯೋ ವಿಚಾರವಾಗಿ ತನಿಖೆ ಶುರುವಾಗಿದೆ. ಜೊತೆಗೆ, ರಾಜಕೀಯದಲ್ಲೂ ಕೆಲವೊಂದು ನಿರ್ಧಾರಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದರ ಬಗ್ಗೆ ಒತ್ತಡವನ್ನು ಹೇರಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ವಿಡಿಯೋಗಳು ವೈರಲ್​ ಆಗಿರುವ ಬೆನ್ನಲ್ಲೇ ಗೃಹ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಬ್ಬ ಅಧಿಕಾರಿಯನ್ನ ಬೇರೆ ಕಡೆ ವರ್ಗಾಯಿಸುವುದಲ್ಲದೇ, ಘಟನೆ ಸಂಬಂಧ ಇಬ್ಬರನ್ನು ಸಸ್ಪೆಂಡ್​ ಮಾಡಲಾಗಿದೆ. ಜೈಲಿನ ಮುಖ್ಯಸ್ಥರನ್ನಾಗಿ ಇನ್ನು ಮುಂದೆ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್​, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ, ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ. ಇನ್ಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆಂದು ವರದಿಯಾಗಿರುತ್ತದೆ.

ಪರಪ್ಪನ ಅಗ್ರಹಾರದಲ್ಲಿ ಹೆಚ್ಚಾಗಿ ಕಾನೂನಿನ‌ ಉಲ್ಲಂಘನೆ ಆಗುತ್ತಲೇ ಇವೆ. ಪದೇ ಪದೇ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಅಪರಾಧಿಗಳಿಗೂ ಸಾಮಾನ್ಯ ಜನರಿಗೂ ಯಾವುದೇ ವ್ಯತ್ಯಾಸವೇ ಇಲ್ಲದಂತೆ ನಡೆಸಿಕೊಳ್ಳುತ್ತಿರುವ ಈ ಜೈಲಿನ ಕಾನೂನನ್ನು ಇನ್ನೂ‌ ಕಠಿಣವಾಗಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆ ಪೈಕಿ ಮುಖ್ಯವಾದ ಕೆಲವು ವಿಡಿಯೋಗಳು 2023ರಲ್ಲಿ ಆಗಿರುವುದು. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿದ್ದು. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್​ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :Actor Sudeep: ಸಿಂಪಲ್ ಸುನಿ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್..ಇದೇ 14ರಂದು ‘ಗತವೈಭವ’ ರಿಲೀಸ್

…………..

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/zBY4CXdK86U?si=njDy5b6YvC72mp8Y

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page