Kadaba: ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಜುಬಿನ್ ಆತ್ಮಹತ್ಯೆಗೆ ಶರಣಾದ ಯುವಕ.
ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25ವ) ತನ್ನ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ.
ಜುಬಿನ್ ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: Viral News: ಬಿಕಿನಿ ತೊಟ್ಟು ಗಂಗಾಸ್ನಾನ ಮಾಡಿದ ಮಹಿಳೆ..!
============
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











