10 ವರ್ಷಗಳ ಹಿಂದೆ ತೆರೆಕಂಡಿದ್ದ ತಿಥಿ ಸಿನೆಮಾದಲ್ಲಿ ಬಣ್ಣ ಹಚ್ಚಿದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಜೀವ ತುಂಬಿದ್ದ ಚನ್ನೇಗೌಡ ಅವರು ಇಹಲೋಕ ತ್ಯಜಿಸಿದ್ದಾರೆ.
2015ರಲ್ಲಿ ತೆರೆಗೆ ಬಂದಿದ್ದ ತಿಥಿ ಸಿನೆಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಇದರಲ್ಲಿ ಬರುವ ಗಡ್ಡಪ್ಪ ಪಾತ್ರದಲ್ಲಿ ಮಿಂಚಿದ್ದ ಹಿರಿಜೀವ ಚನ್ನೇಗೌಡ ಅವರು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಚನ್ನೇಗೌಡ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು (ನವೆಂಬರ್ 12) ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದ ಹಿನ್ನಲೆ ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು.
ಚನ್ನೇಗೌಡ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು, ಉಬ್ಬಸ, ಶ್ರವಣ ದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿದ್ದವು. ಚನ್ನೇಗೌಡ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು.
ಇದನ್ನೂ ಓದಿ: E- Card : ಹೊಸ ಇ-ಖಾತೆ ವ್ಯವಸ್ಥೆಯಿಂದ ಆಸ್ತಿದಾರರಿಗೆ ಅನುಕೂಲ
======================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/CtGAO-3-DzU?si=ovV1ndkpZP-76lQQ











