Government : ಕರ್ನಾಟಕ ಸರ್ಕಾರವು 2023 ರಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಿದ್ಧರಾಮಯ್ಯ ಮತ್ತು ಮಹಿಳಾ ಸಬಲೀಕರಣ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ, ಪ್ರತಿ ತಿಂಗಳು ರೂ. 2,000 ಹಣವನ್ನು ಪ್ರತೀ ಮನೆಯಲ್ಲಿನ ಮಹಿಳಾ ಮುಖ್ಯಸ್ಥೆಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಅದೆಷ್ಟೋ ಮಹಿಳೆಯರು ಇದರ ಉಪಯೋಗವನ್ನು ಪಡೆದುದಲ್ಲದೇ ಆರ್ಥಿಕವಾಗಿ ಪ್ರಬಲವಾಗುವ ಅವರ ಕನಸು ಹೆಚ್ಚಾಗುತ್ತಲೇ ಇತ್ತು.
ಇದರ ಉದ್ದೇಶ ಕೂಡಾ ಕುಟುಂಬದಲ್ಲಿನ ಮಹಿಳಾ ಮುಖ್ಯಸ್ಥೆಗಳಿಗೆ ಆರ್ಥಿಕ ಸಹಾಯ ಮಾಡುವುದು, ಬಡ ಕುಟುಂಬಗಳ ಜೀವನಮಟ್ಟವನ್ನು ಸುಧಾರಿಸುವುದಾಗಿದೆ. ಆದರೆ ಇದೀಗ, ರಾಜ್ಯದ ‘ಗೃಹಲಕ್ಷ್ಮಿ’ ಫಲಾನುಭವಿಗಳ ಅನುಕೂಲಕ್ಕಾಗಿ ಸರ್ಕಾರ ಸಂಘ ಸ್ಥಾಪಿಸುವ ನಿರ್ಧಾರಕ್ಕೆ ಬಂದಿದ್ದು, ನ.19 ರಂದು ಅಧಿಕೃತ ಚಾಲನೆ ಸಿಗಲಿದೆ. ಈ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ಸಿಗಲಿದೆ. ನ.19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ ಎಂದು ವರದಿಯಾಗಿರುತ್ತದೆ.
ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು, ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ :ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಬಿಹಾರ ಮೂಲದ ಯುವಕನ ಬಂಧನ
…………
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Bd7Ce8dJBm0?si=PVqCd6an2dgXSUwk











