Madikeri: ಮನೆಯೊಂದರಿಂದ ಬರೋಬ್ಬರಿ 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ – ಮಡಿಕೇರಿ ನಡುವಿನ ಚೆಂಬು ಗ್ರಾಮದ ಮನೆಯೊಂದರಿಂದ ಕಳವು ನಡೆದಿತ್ತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಸಿದ್ದಲಿಂಗು ಎನ್. (28) ಮತ್ತು ರಘು ಎನ್. (26) ಬಂಧಿತರು.
ನ.5ರಂದು ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ. ಅವರ ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಕಳ್ಳತನ ನಡೆದಿತ್ತು. ಕಪಾಟಿನಲ್ಲಿದ್ದ ಅಂದಾಜು 15,000 ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದರು.
ಮಡಿಕೇರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಆರೋಪಿಗಳಿಂದ 8,50,000 ರೂ. ನಗದು, 120 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Dakshina Kannada: ಮೂರು ಠಾಣೆಯ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ
====================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











