Bengaluru: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಎಸ್‍ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
‘ಇಂದು ಬಿಹಾರ, ನಾಳೆ ಕರ್ನಾಟಕ’ ‘ಭಾರತ್ ಮಾತಾಕೀ ಜೈ’ ‘ನರೇಂದ್ರ ಮೋದಿಜೀ ಕೀ ಜೈ’ ‘ಬಿಜೆಪಿಗೆ ಜಯವಾಗಲಿ’ –ಇವೇ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕರ್ತರು ಎಲ್ಲಿ ನೋಡು ಅಲ್ಲಿ ನೋಡು ಬಿಜೆಪಿ ಎಂಬ ಘೋಷಣೆ ಕೂಗುತ್ತ, ಧ್ವಜ ಬೀಸುತ್ತ ನೃತ್ಯ ಮಾಡಿದರು. ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಲಾಯಿತು.
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ!
ವೃಕ್ಷ ಮಾತೆ’ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಎಂಬುವವರನ್ನು ವಿವಾಹವಾದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ಅಲ್ಲದೇ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











