ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

Surathkal: ಸಿಗ್ನಲ್‌ನಲ್ಲಿ ನಿಂತಿದ್ದ ರಿಕ್ಷಾಗೆ ಟ್ಯಾಂಕರ್‌ ಡಿಕ್ಕಿ – ಮೂವರು ಮೃತ್ಯು

Surathkal: ಸಿಗ್ನಲ್‌ನಲ್ಲಿ ನಿಂತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಟ್ಯಾಂಕರ್‌ ಡಿಕ್ಕಿಯಾದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಸರಣಿ ರಸ್ತೆ ಅಪಘಾತ ನಡೆದಿದೆ. ಸಿಗ್ನಲ್‌ನಲ್ಲಿ ಸರತಿಯಲ್ಲಿದ್ದ ಟ್ಯಾಂಕರ್‌ ಒಂದರ ಹಿಂದೆ ಆಟೋ ರಿಕ್ಷಾ ಹಾಗೂ ಕಾರು ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಕಾರಿನ ಹಿಂಭಾಗ ಜಖಂಗೊಂಡಿದೆ.

ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿದೆ. ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಬ್ಬರು ಮತ್ತು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  BBK12: ತನ್ನ ಮಕ್ಕಳ ವೀಡಿಯೋ ನೋಡೋಕೆ ಆಗಿಲ್ಲ ಅಂತ ಬಿಕ್ಕಿ ಬಿಕ್ಕಿ ಅತ್ತ ಮಾಳು!!

===============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :  https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 35

You cannot copy content of this page