ಬ್ರೇಕಿಂಗ್ ನ್ಯೂಸ್
ಕರ್ನಾಟಕ

Tiger Attack : ವ್ಯಾಘ್ರನ ಅಟ್ಟಹಾಸಕ್ಕೆ ಹೊಸ ಫ್ಲಾನ್ : 10 ಸಾವಿರ ಮಾಸ್ಕ್ ವಿತರಣೆ

Tiger Attack : ಮೈಸೂರಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿಯ ಆರ್ಭಟ ಹೆಚ್ಚಾದ ಹಿನ್ನಲೆ ಅರಣ್ಯ ಇಲಾಖೆಯಿಂದ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ಮೇಲಿಂದ ಮೇಲೆ ಹುಲಿಯ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದ್ದ ಕಾರಣ ಈ‌ ನಡುವೆ ಕಾಡಿನಿಂದ ನಾಡಿಗೆ ಬಂದಿರೋದು ಒಂದೆರಡಲ್ಲ, ಬರೋಬ್ಬರಿ 20 ಹುಲಿಗಳು ಎನ್ನುವ ವಿಚಾರ ಜನರ ನಿದ್ದೆಗೆಡಿಸಿದೆ. ಹೀಗಾಗಿ, ಕಾಡಂಚಿನ ಗ್ರಾಮಗಳ ರೈತರು ಮತ್ತು ದನಗಾಹಿಗಳ ಮೇಲೆ ಹುಲಿ ದಾಳಿ ತಪ್ಪಿಸಲು ಅರಣ್ಯ ಇಲಾಖೆ ಒಂದು​ ಪ್ಲ್ಯಾನ್​ ಮಾಡಿದ್ದು, ಇದು ವಿಶೇಷವಾಗಿದೆ.

ಹುಲಿ ದಾಳಿ ತಪ್ಪಿಸುವ ನಿಟ್ಟಿನಲ್ಲಿ ಮುಖವಾಡ ;

ಈಗಾಗಲೇ, ಜನರಿಗೆ ಮುಖವಾಡಗಳ ವಿತರಣೆ ಮಾಡಿದ್ದು ಹುಲಿಯಿಂದ‌ ಹೇಗೆ ಪಾರಾಗುವುದು ಎಂದು ಮಾರ್ಗದರ್ಶನ ನೀಡಲಾಗಿದೆ. ಸಾಮಾನ್ಯವಾಗಿ ಹುಲಿಗಳು ಜಾನುವಾರುಗಳ ಮೇಲೆ ದಾಳಿ ಮಾಡುತ್ತವೆ. ಮನುಷ್ಯನ ಮೇಲೆ ದಾಳಿ ನಡೆಸುವುದಿಲ್ಲ. ಒಂದು ವೇಳೆ ಆತ ಕುಳಿತುಕೊಂಡಿದ್ದರೆ ಅಥವಾ ಬಗ್ಗಿರುವ ಸ್ಥಿತಿಯಲ್ಲಿ ಕಂಡು ಬಂದರೆ ಹಿಂಬಂದಿಯಿಂದ ಅವು ದಾಳಿ ಮಾಡುವ ಸಾಧ್ಯತೆ ಇರುತ್ತವೆ. ಹೀಗಾಗಿ ಹುಲಿ ದಾಳಿ ತಪ್ಪಿಸುವ ನಿಟ್ಟಿನಲ್ಲಿ ಮುಖವಾಡಗಳನ್ನ ನೀಡಲಾಗಿದೆ. ಬರೋಬ್ಬರಿ 10 ಸಾವಿರ ಮಾಸ್ಕ್‌ನ್ನು ರೈತರಿಗೆ ಅರಣ್ಯ ಇಲಾಖೆ ವಿತರಿಸಿದೆ. ಪಶ್ಚಿಮ ಬಂಗಾಳದ ಸುಂದರ್‌ಬನ್ಸ್ ಪ್ರದೇಶದ ಸಮುದಾಯದಲ್ಲಿ ಹುಲಿದಾಳಿಯಿಂದ ತಪ್ಪಿಸಿಕೊಳ್ಳಲು ಮುಖವಾಡ ಧರಿಸುವ ಈ ಕ್ರಮ ಚಾಲ್ತಿಯಲ್ಲಿದ್ದು, ಇದರಿಂದಲೇ ರಾಜ್ಯದ ಅರಣ್ಯ ಇಲಾಖೆಯೂ ಪ್ರೇರಿತವಾಗಿದೆ ಎನ್ನಲಾಗಿದೆ.

ಅಮಾಯಕ ಜೀವಗಳು ಬದುಕುಳಿದರೆ ಸಾಕು ;

ಅರಣ್ಯ ಸಿಬ್ಬಂದಿ ಕಾಡಂಚಿನ ಗ್ರಾಮಗಳಿಗೆ ಭೇಟಿ ನೀಡಿ, ಮುಖವಾಡಗಳನ್ನು ಹಂಚುತ್ತಿದ್ದಾರೆ. ಕೃಷಿ ಮತ್ತು ಪಶುಸಂಗೋಪನೆ ಮಾಡಲು ತೆರಳುವ ರೈತರಿಗೆ ಮುಖವಾಡ ಯಾಕೆ ಧರಿಸಬೇಕು ಎಂಬ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ಪ್ರಕಟಣೆಗಳನ್ನೂ ಮಾಡಲಾಗುತ್ತಿದೆ. ಮುಖವಾಡಗಳ ಜೊತೆಗೆ, ಕಾಡು ಪ್ರಾಣಿಗಳ ಎದುರಿನಲ್ಲಿ ಹೇಗೆ ವರ್ತಿಸಬೇಕು? ಯಾವುದನ್ನು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬ ಮಾಹಿತಿಯನ್ನೂ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಅಮಾಯಕ ಜೀವಗಳು ಬದುಕುಳಿದರೆ ಸಾಕು.

ಇದನ್ನೂ ಓದಿ :Life: ಎಲ್ಲರೂ ನಿಮ್ಮನ್ನು ಮೂಲೆಗುಂಪು ಮಾಡುತ್ತಾರೆಯೇ? ಹಾಗಾದ್ರೆ ಈ ಟ್ರಿಕ್ಸ್ ನಿಮಗಾಗಿ!

….

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/vXhwD33EPDk?si=KRIGAzO0rhTFKOng

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page