ಬ್ರೇಕಿಂಗ್ ನ್ಯೂಸ್
ಕರ್ನಾಟಕ

Bigg Boss : ಬಿಗ್ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Bigg Boss : ಬಿಗ್ಬಾಸ್ ಸೀಸನ್ 12 ರ ಸ್ಪರ್ಧಿ ಗಿಲ್ಲಿ ನಟ ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ದಿನಗಳ ಹಿಂದೆ ಬಾತ್ ರೂಂ ಬಕೆಟ್ ವಿಚಾರಕ್ಕೆ ಜಗಳವಾಗಿತ್ತು. ಈ ವೇಳೆ ಗಿಲ್ಲಿ ರಿಷಾ ಗೌಡ ಅವರ ಬಟ್ಟೆಗಳನ್ನು ತಂದು ಬಾತ್ ರೂಂ ಏರಿಯಾದಲ್ಲಿ ಹಾಕಿದ್ದರು. ಇದರಿಂದ ಕೋಪಗೊಂಡ ರಿಷಾ ಗಿಲ್ಲಿಗೆ ಹೊಡೆದಿದ್ದರು. ಕಿಚ್ಚನ ಪಂಚಾಯಿತಿಯಲ್ಲೂ ಈ ವಿಚಾರ ಭಾರೀ ಸದ್ದಾಗಿತ್ತು. ಅದರ ಬೆನ್ನಲ್ಲೇ ಇದೀಗ ಗಿಲ್ಲಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಗಿಲ್ಲಿ ನಟನ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.ಅಲ್ಲದೇ ಹೆಣ್ಣು ಮಕ್ಕಳ ಬಟ್ಟೆಯನ್ನು ಅವರ ಅನುಮತಿ ಇಲ್ಲದೇ ಮುಟ್ಟೋದು ತಪ್ಪು. ಆದರೆ ಗಿಲ್ಲಿ ಅವುಗಳನ್ನು ತಂದು ಬಾತ್ ರೂಂ ಏರಿಯಾದಲ್ಲಿ ಹಾಕಿದ್ದಾರೆ. ಇದು ಹೆಣ್ಣು ಮಕ್ಕಳಿಗೆ ಮಾಡುವ ಅವಮಾನ ಎಂದಿದ್ದಾರೆ. ಇನ್ನು ದೂರು ಬಂದ ಹಿನ್ನೆಲೆ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳುಹಿಸಿದೆ.

 

ಇದನ್ನೂ ಓದಿ :Kadaba: ಮಹಿಳೆಗೆ ಲೈಂಗಿಕ ಕಿರುಕುಳ ಯತ್ನ – ಆರೋಪಿ ಅರೆಸ್ಟ್‌

……

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/vXhwD33EPDk?si=KRIGAzO0rhTFKOng

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page