ಬ್ರೇಕಿಂಗ್ ನ್ಯೂಸ್
ಕರ್ನಾಟಕ

Survey: ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು!

Survey: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ  ಎಂದು ಉಚ್ಚ ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಕ್ಯೂನಲ್ಲಿ ನಿಂತಿದ್ದ 58 ವರ್ಷದ ಮಹಿಳೆ ಕುಸಿದು ಸಾವು..!

ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ!

ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. ಅದರಂತೆ ಆಯೋಗದಿಂದ  ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು   ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರದ ಹಿನ್ನೆಲೆ ಟೆಂಪಲ್‌ ತಲುಪಿದ ತನ್ವೀರ್ ಅಹಮ್ಮದ್ ಉಲ್ಲಾ ಟೀಮ್!

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ  ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಇದನ್ನೂ ಓದಿ: ಮೊಯ್ದಿನ್‌ ಬಾವಾ ವಾಟ್ಸಾಪ್‌ ಹ್ಯಾಕ್‌ – ಹಣಕ್ಕಾಗಿ ಬೇಡಿಕೆಯಿಟ್ಟ ಖದೀಮರು

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರ ಮುಖ್ಯ ಉದ್ದೇಶ ಏನೆಂದರೆ,  ರಾಜ್ಯದ ಕುಟುಂಬಗಳು ಮತ್ತು ವ್ಯಕ್ತಿಗಳ ನಿಖರವಾದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸುವುದು, ಇದರಿಂದಾಗಿ ರಾಜ್ಯ ಸರ್ಕಾರವು ಉತ್ತಮ ನೀತಿಗಳನ್ನು ರೂಪಿಸಲು ಮತ್ತು ಕಲ್ಯಾಣ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page