ಬ್ರೇಕಿಂಗ್ ನ್ಯೂಸ್
ಕರ್ನಾಟಕದೇಶ

Birth Day: ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮ ದಿನಾಚರಣೆ!

Birth Day: ಇಂದು ಭಾರತದ ಮಾಜಿ ಪ್ರಧಾನಿ ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ  ವರ್ಷದ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಇಂದಿರಾಗಾಂಧಿ ಅವರನ್ನು ನೆನೆಸಿಕೊಂಡಿದ್ದಾರೆ.

ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ, ಪುಷ್ಪಾರ್ಚನೆ ಮಾಡಿದ್ದಾರೆ.

ಇನ್ನು ಇಂದಿರಾ ಗಾಂಧಿ ಅವರ ಬಗ್ಗೆ ಕುತೂಹಲಕಾರಿ ಸಂಗತಿಗಳನ್ನು ನಾವು ನೋಡೋದಾದ್ರೆ, ಭಾರತದ ಎರಡನೇ ಅತಿ ಹೆಚ್ಚು ಅವಧಿಯ ಪ್ರಧಾನ ಮಂತ್ರಿಯಾಗಿದ್ದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯಂತಹ ಸುಧಾರಣೆಗಳನ್ನು ಜಾರಿಗೆ ತಂದ ಅವರು ಭಾರತದ ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದರು. ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ 1917ರ ನವಂಬರ್ 19 ರಂದು ಜವಾಹರ್ ಲಾಲ್ ನೆಹರು, ಕಮಲಾ ದಂಪತಿಗಳಿಗೆ ಇವರು ಜನಿಸುತ್ತಾರೆ.

ಇಂದಿರಾ ಗಾಂಧಿ ಲೈಫ್ ಸ್ಟೈಲ್‌ ಹೇಗಿತ್ತು..?

ಉನ್ನತ ಶಿಕ್ಷಣಕ್ಕಾಗಿ ಇಂದಿರಾ ಗಾಂಧಿಯವರು ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯಕ್ಕೆ ಸೇರಿಕೊಂಡರು. ಆದರೆ, ಅವರ ಕೋರ್ಸ್ ಮುಗಿಸಲು ಸಾಧ್ಯವಾಗಲಿಲ್ಲ.1942 ರಲ್ಲಿ ಫಿರೋಜ್ ಗಾಂಧಿ ಅವರನ್ನು  ವಿವಾಹವಾದರು. ಇವರಿಗೆ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಎಂಬ ಇಬ್ಬರು ಗಂಡು ಮಕ್ಕಳಿದ್ದರು. 1938 ರಲ್ಲಿ, ಅವರು ಅಧಿಕೃತವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು.  ಅವರು ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಜನವರಿ 1980ರಿಂದ ಅಕ್ಟೋಬರ್ 1984ರಲ್ಲಿ ಅವರ ಹತ್ಯೆಯಾಗುವವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ದೇಶದ ಆಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದರು. ಇಳುವರಿಯ ಬೀಜಗಳು, ನೀರಾವರಿ ಯೋಜನೆ, ಆರ್ಥಿಕತೆಗೆ ಉತ್ತೇಜನ, ಆಹಾರ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ಮತ್ತು ಪರಮಾಣು ಕಾರ್ಯಕ್ರಮಗಳ ನೇತೃತ್ವ ವಹಿಸಿದರು. 1974ರಲ್ಲಿ ಭೂಗತ ಪರಮಾಣು ಸ್ಪೋಟ ನಡೆಸಿ ವಿಶ್ವಕ್ಕೆ ಭಾರತದ ಶಕ್ತಿಯನ್ನು ಮೊದಲ ಬಾರಿಗೆ ಪರಿಚಯಿಸಿದರು. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ಮನೆಯ ಇಬ್ಬರು ಭದ್ರತಾ ಸಿಬ್ಬಂದಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 196

You cannot copy content of this page