ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರುಶೈಕ್ಷಣಿಕ

Puttur: ನ.21 ರಂದು ಅಕ್ಷಯ ಕಾಲೇಜಿನಲ್ಲಿ ಪಿಯು ಫೆಸ್ಟ್ !

Puttur: ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತ‌ರ್ ಕಾಲೇಜು ಮಟ್ಟದ ಅಟರ್ನೆಸ್ ಪಿಯು ಫೆಸ್ಟ್ ಕಾರ್ಯಕ್ರಮ ನ.21ರಂದು ಸಂಪ್ಯದ ಅಕ್ಷಯ ಪದವಿ ಕಾಲೇಜಿನಲ್ಲಿ ನಡೆಯಲಿದೆ.

ವೈಯಕ್ತಿಕ ಮತ್ತು ಗುಂಪು ಸೇರಿದಂತೆ ಒಟ್ಟು 16 ಸ್ಪರ್ಧೆಗಳು ನಡೆಯಲಿದ್ದು, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್‌ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್‌ ನಡುಬೈಲು ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಬಡ್ಡಿ ತರಬೇತುದಾರ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಪ್ರಶಾಂತ್ ರೈ ಕೈಕಾರ, ಲಿಟ್ಸ್ ಫ್ಲವರ್ ಶಾಲೆಯ ಸಹಶಿಕ್ಷಕ ಬಾಲಕೃಷ್ಣ ರೈ ಪೋರ್ದಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ಮುಂದೆ ಹಾವು ಕಚ್ಚಿದ್ರೆ ಚಿಕಿತ್ಸೆಗೆ ದುಡ್ಡು ಕೊಡಬೇಕಾಗಿಲ್ಲ..!

ಅಕ್ಷಯ ಕಾಲೇಜಿನ ಪರಿಚಯ..!

ಕೆರಿಯರ್ ಡೆಸ್ಟಿನಿ ಮೂಲಕ ನುರಿತ ಬೋಧಕ ವೃಂದದೊಡನೆ ಕೇವಲ ಬಿ.ಕಾಂ ಪದವಿಯೊಂದಿಗೆ ಮಾತ್ರವಲ್ಲದೆ , ಬಿಸಿಎ, ಫ್ಯಾಷನ್ ಡಿಸೈನ್, ಇಂಟೀರಿಯರ್ ಡಿಸೈನ್ ಹಾಗೂ ವಿಶೇಷವಾಗಿ ಬಿ. ಎ ವಿದ್‌ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಮೂಲಕವೂ ವಿದ್ಯಾರ್ಥಿಗಳಿಗೆ ಮತ್ತಷ್ಟು ಅವಕಾಶ ಕಲ್ಪಿಸುತ್ತಿದೆ. ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ವಿಶೇಷ ವಿದ್ಯಾರ್ಥಿವೇತನವೂ ದೊರೆಯುತ್ತಿದೆ.

ಇದನ್ನೂ ಓದಿ: ಬಿಜೆಪಿ – ಪುತ್ತಿಲ ಪರಿವಾರದಲ್ಲಿ ಬಿರುಕು! ಅಟಲ್‌ ವಿರಾಸತ್‌ ಕಾರ್ಯಕ್ರಮಕ್ಕೆ ಪುತ್ತಿಲ ಗೈರು

ಹಾಗೆಯೇ, ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.)ನ ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಕೆರಿಯರ್ ಡೆಸ್ಟಿನಿ, ಮಂಗಳೂರು ಜಂಟಿಯಾಗಿ ಯಾವುದೇ ಸಂಸ್ಥೆಯಲ್ಲಿ ಪದವಿ ಅಥವಾ ಪಿಯುಸಿ ಪೂರೈಸಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪುತ್ತೂರಿನ ದರ್ಬೆಯಲ್ಲಿ ಒಂದು ವರ್ಷದ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಕೋರ್ಸನ್ನು ಕೂಡ ಪ್ರಾರಂಭಿಸಿದೆ. ಈ ವಿಭಾಗದಲ್ಲಿಯೂ ಹೆಚ್ಚಿನ ವಿದ್ಯಾರ್ಥಿಗಳಿಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮುಂದಿನ 2026-27ನೇ ಶೈಕ್ಷಣಿಕ ಸಾಲಿನಿಂದ ಬಿಬಿಎ ಲಾಜಿಸ್ಟಿಕ್, ಬಿಬಿಎ ವಿತ್ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಪದವಿಯನ್ನು ಪ್ರಾರಂಭಿಸಲು ಚಿಂತಿಸಿದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ಒದಗಿ ಬರಲಿದೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 162

You cannot copy content of this page