Bengaluru: ಒಂಭತ್ತು ತಿಂಗಳಿನಿಂದ ನಾಲ್ಕು ವರ್ಷದೊಳಗಿನ ಮಕ್ಕಳನ್ನು ಹಿಂಬದಿ ಸವಾರರನ್ನಾಗಿ ಕರೆದುಕೊಂಡು ಹೋಗುವಾಗ ಮಕ್ಕಳೂ ಹೆಲ್ಮೆಟ್ ಧರಿಸಿರಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ..!
ಶಿವಮೊಗ್ಗದ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಕೆ.ಅರ್ಚನಾ ಭಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ. ಇನ್ನು ಹೈಕೋರ್ಟ್ ಆದೇಶ ನೋಡೋದಾದರೆ, ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಅನ್ವಯಿಸುವ ಕೇಂದ್ರ ಮೋಟಾರು ವಾಹನ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮುಂದುವರೆಸಬೇಕು’ ಎಂದು ನ್ಯಾಯಪೀಠವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇದನ್ನೂ ಓದಿ: 8 ವರ್ಷದ ಬಾಲಕಿ ಹೊಟ್ಟೆಯಲ್ಲಿ 3 ಕೆ.ಜಿ ಕೂದಲು ಪತ್ತೆ!
‘ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಅವುಗಳಾವುವೂ ಜಾರಿಗೆ ಬಂದಿಲ್ಲ. ಹೀಗಾಗಿ, ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿರುವ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೋಟಾರು ಸೈಕಲ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸುವಾಗ ಸುರಕ್ಷತಾ ಸಾಧನ ಹಾಗೂ ಕ್ರ್ಯಾಶ್ ಹೆಲ್ಮೆಟ್ ಬಳಸಬೇಕು. ಜತೆಗೆ, 4 ವರ್ಷದವರೆಗಿನ ಮಕ್ಕಳನ್ನು ಹಿಂಬದಿ ಸವಾರರಾಗಿ ಕೂರಿಸಿಕೊಂಡು ಹೋಗುವಾಗ ಮೋಟಾರ್ ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ ಗಿಂತ ಹೆಚ್ಚಿರಬಾರದು ಎಂದು ಹೊಸ ನಿಯಮದಲ್ಲಿ ತಿಳಿಸಲಾಗಿದೆ.
ಪೋಷಕರು ಈ ನಿಯಮವನ್ನು ಗಂಭೀರವಾಗಿ ಪರಿಗಣಿಸಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಒಂದು ಸಣ್ಣ ತಪ್ಪಿಗೆ ಮಗುವಿನ ಜೀವಕ್ಕೆ ಅಪಾಯ ಉಂಟಾಗಬಾರದು ಎಂಬುದೇ ಮೂಲ ಉದ್ದೇಶ. ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕರ್ನಾಟಕದ ಎಲ್ಲ ನಗರಗಳಲ್ಲಿ ಈ ನಿಯಮವನ್ನು ಶೀಘ್ರದಲ್ಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











