ಕರ್ನಾಟಕ: Tulu Times | ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತರು ಬಲೆ ಬೀಸಿದ್ದಾರೆ.
ದಾವಣಗೆರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದಾರೆ, ಎಪಿಎಂಸಿ ಅಗ್ರಿಕಲ್ಚರ್ ಸೇಲ್ಸ್ ಡಿಪೋ ಸಹಾಯಕ ನಿರ್ದೇಶಕ ಪ್ರಭು ಜೆ, ಹಾವೇರಿ ಯೋಜನಾ ನಿರ್ದೇಶಕ ಕಚೇರಿಯ ಇಇ ಶೇಖಪ್ಪ ನಿವಾಸ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಆಂಜನೇಯ ನಗರ ಬಡಾವಣೆಯಲ್ಲಿರುವ ಪ್ರಭು ಜೆ. ಮನೆಗೆ ನುಗ್ಗಿದ್ದಾರೆ. ಚನ್ನಗಿರಿ ತಾಲೂಕಿನ ಅರಿಸಿಣಘಟ್ಟ ಗ್ರಾಮದಲ್ಲಿರುವ ಫಾರ್ಮ್‌ಹೌಸ್ , ಎಪಿಎಂಸಿ ಆವರಣದಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಹಾವೇರಿಯ ಅಧಿಕಾರಿ ಶೇಖಪ್ಪ ಮತ್ತಿಕಟ್ಟಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ, ಹರಿಹರ, ದಾವಣಗೆರೆಯಲ್ಲಿ ಇರುವ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಬೀದರ್ ನಲ್ಲೂ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜನೀಯರ್ ಪ್ರೇಮ್‌ಸಿಂಗ್ ರಾಥೋಡ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೀದರ್‌ನ ಶಿವನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಭೀಮರಾಯನ ಗುಡಿಯ ನಿವಾಸ & ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದ ನಿವಾಸಿಯಾಗಿರುವ ಪ್ರೇಮ್ ಸಿಂಗ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಪ್ರೇಮ್ ಸಿಂಗ್ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಭೀಮರಾಯನ ಗುಡಿ ವೃತ್ತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯಾಗಿದ್ದಾರೆ.
ಹಾವೇರಿಯಲ್ಲಿಯೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ನಿವಾಸದ ಮೇಲೆ ಲೋಕಾ ದಾಳಿ ನಡೆದಿದೆ. ಆದಾಯಕ್ಕಿಂತ 207 % ಹೆಚ್ಚುವರಿ ಸಂಪತ್ತು ಗಳಿಸಿದ ಆರೋಪ ಹೊಂದಿರೋ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ, ಭ್ರಷ್ಟ ಅಧಿಕಾರಿ ಶೇಖಪ್ಪನಿಗೆ ಸಂಬಂಧಿಸಿದ ಮನೆಗಳು, ವಾಣಿಜ್ಯ ಸಂಕೀರ್ಣ ಸೇರಿ 6 ಕಡೆ ಲೋಕಾ ದಾಳಿ ನಡೆಸಲಾಗಿದೆ. ಒಟ್ಟು 17 ನಿವೇಷನಗಳು, 1 ವಾಣಿಜ್ಯ ಕಟ್ಟಡ, 2 ವಸತಿ ಕಟ್ಟಡಗಳು ಸೇರಿದಂತೆ ಸಂಬಂಧಿಕರ ಹೆಸರಲ್ಲೂ ಅಕ್ರಮ ಆಸ್ತಿ ಹೊಂದಿರೋ ಕಾರ್ಯ ಪಾಲಕ ಇಂಜನಿಯರ್ ಶೇಖಪ್ಪ, ಒಟ್ಟು 3, 46, 68,587 ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರೋ ಹೊಂದಿದ್ದಾರೆ. ಹುಬ್ಬಳ್ಳಿ ಅಕ್ಷಯ ಪಾರ್ಕ್ ನಲ್ಲಿ 3 ಗುಂಟೆ 8 ಅಣೆ ವಿಸ್ತೀರ್ಣದ ಕಮರ್ಷಿಯಲ್ ಕಾಂಪ್ಲೆಕ್ಸ್, ಹುಬ್ಬಳ್ಳಿ ಬೈರಿದೇವರಿಕೊಪ್ಪ ಗ್ರಾಮದಲ್ಲಿ 2 ಅಂತಸ್ಥಿನ ಆರ್ ಸಿಸಿ ಮನೆದಾವಣಗೆರೆಯಲ್ಲಿ ಆರ್ ಸಿ ಸಿ ಮನೆ, ಸೇರಿದಂತೆ ಹಲವು ಕಡೆ ಅಕ್ರಮ ಹಣದಲ್ಲಿ ಆಸ್ತಿ ಖರೀದಿಸಿರುವ ಭ್ರಷ್ಟ ಅಧಿಕಾರಿ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಲಕ್ಷ್ಮಿಪತಿಗೆ ಸೇರಿದ ಎರಡು ಸ್ಥಳ ಹಾಗೂ ಸಿಮ್ಸ್ ಕಚೇರಿ ಮೇಲೆ ಏಕಾಕಾಲಕ್ಕೆ ದಾಳಿ ನಡೆಸಲಾಗಿದೆ. ಸಿಮ್ಸ್ ಕಾಲೇಜಿನ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ, ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಗಳಲ್ಲಿ ರೈಡ್ ಮಾಡಲಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌದರಿ ನೇತೃತ್ವದಲ್ಲಿ ದಾಳಿ ಮುಂದುವರಿದಿದೆ.
ಗದಗನಲ್ಲಿ ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಲಾಗಿದೆ. ಸತೀಶ್ ಕಟ್ಟಿಮನಿ ಪಶುವೈದ್ಯಕೀಯ ಪರೀಕ್ಷಕ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಗದಗ ನಗರದಲ್ಲಿ ನಾಲ್ಕು ಕಡೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೇಲ್ ಪೇರ್ ಟೌನ್ ಶಿಪ್ ಪ್ರದೇಶದಲ್ಲಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಸತೀಶ್ ಕಟ್ಟಿಮನಿ ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಕೆಲಸ ಮಾಡ್ತಾಯಿದ್ರು, ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಇನ್ಸ್ಪೆಕ್ಟರ್ ಪರಮೇಶ್ವರ ಕೌಟಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Why were corrupt officials locked up in the wake of the Lokayukta attack?- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











