ಸುಬ್ರಹ್ಮಣ್ಯ: Tulu Times | ಇಂದು ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ದೇವರ ಮಹಾರಥೋತ್ಸವ ಸಂಪನ್ನಗೊಂಡಿದ್ದು, ಲಕ್ಷಾಂತರ ಮಂದಿ ಭಕ್ತರು ದೇವರ ದರ್ಶನ ಕಂಡು ಪುನೀತರಾಗಿದ್ದಾರೆ.
ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಶ್ರದ್ಧಾ, ಭಕ್ತಿಯಿಂದ ಅದ್ಧೂರಿಯಾಗಿ ನೆರವೇರಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ ಅವಳಿ ಕಟ್ಟೆಯಲ್ಲಿ ಪೂಜೆ ನಡೆಯಿತು.
ಇನ್ನು ದೇವಸ್ಥಾನದಲ್ಲಿ ಕೆಲವು ದಿನಗಳಿಂದಲೇ ಪೂಜೆ ಪುನಸ್ಕಾರಗಳು ನಡೆಯುತ್ತಿದ್ದು, ಭಕ್ತರು ದೂರದೂರುಗಳಿಂದ ಆಗಮಿಸಿದ್ದರು. ಮೂರು ದಿನಗಳು ಮಾತ್ರವೇ ಎಡೆಮಡೆಸ್ನಾನವನ್ನು ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿತ್ತು. ಈ ಸೇವೆಯನ್ನು ಮಾಡಿದಲ್ಲಿ ಆರೋಗ್ಯ ಸಂಬಂಧಿ ಮತ್ತು ಚರ್ಮ ಸಂಬಂಧಿ ರೋಗಗಳು ಗುಣಮುಖವಾಗುತ್ತೆ ಎಂಬ ನಂಬಿಕೆ ಭಕ್ತರದ್ದಾಗಿದೆ.
ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇನ್ನು ಈ ವರ್ಷ ಸಾವಿರಾರು ಭಕ್ತರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಬೆಳ್ಳಂಬೆಳಗ್ಗೆ ಮಹಾರಥೋತ್ಸವ ಎಳೆಯಲು ಭಕ್ತರು ಸಾಲು ಸಾಲು ಸಂಖ್ಯೆಯಲ್ಲಿ ಆಗಮಿಸಿದ್ದರು. ಭಕ್ತರು ಹರಕೆಗಳ ಜೊತೆ ರಥಕ್ಕೆ ಕೈಮುಗಿದು ದೇವರಲ್ಲಿ ಶ್ರದ್ಧಾಭಕ್ತಿಯಿಂದ ಬೇಡಿಕೊಂಡಿದ್ದಾರೆ.
Kukke Subrahmanya Champa Shashthi: Maharathotsava concludes.. An ocean of devotees has poured in!! – ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











