ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

ಬೆಳ್ತಂಗಡಿ: ಅಪ್ರಾಪ್ತೆ ಗರ್ಭಿಣಿ – ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ

ಬೆಳ್ತಂಗಡಿ – ತುಳು ಟೈಮ್ಸ್‌ : ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಮ್ಜತ್ ಖಾನ್ (18ವ) ಬಂಧಿತ ಆರೋಪಿ. ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ.

16ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ್ದಾಗಿ ಸಂತ್ರಸ್ಥೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ವೇಣೂರಿನ ತನ್ನ ಸಂಬಂಧಿಕರ ಮನೆಗೆ ಅಪ್ರಾಪ್ತೆ ಬಂದಿದ್ದಾಳೆ. ಈ ವೇಳೆ ಅಲ್ಲಿದ್ದ ಅತ್ತೆಯ ಮಗ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದಾನೆ.

 

ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿ, ಆ ನಂತರ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ನಿರಂತರ ದೌರ್ಜನ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ಅನಾರೋಗ್ಯದ ಕಾರಣ ವೇಣೂರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಗರ್ಭಿಣಿಯಾಗಿರುವುದು ಖಚಿವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಆರೋಪಿ ಅಮ್ಜತ್ ಖಾನ್‌ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

Belthangady: A POCSO case has been registered at the Venur Police Station against the accused in connection with a case in which a minor girl got pregnant after having forced sexual intercourse with her under the jurisdiction of the Venur Police Station. – Tulu Times

ಇದನ್ನೂ ಓದಿ: ಹಾರ್ಟ್ ಅಟ್ಯಾಕ್‌ ನಿಂದ ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ನಿಧನ !


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 38

You cannot copy content of this page