ಬೆಂಗಳೂರು : Tulu Times | ಕರ್ನಾಟಕ ಸರ್ಕಾರವು ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಲು ಆರಂಭಿಸಿದ ಕಲ್ಯಾಣ ಯೋಜನೆಗಳ ಸಮೂಹವೇ “ವಿದ್ಯಾಸಿರಿ” ಯೋಜನೆ. ಇದನ್ನು ಸಾಮಾಜಿಕ ಕಲ್ಯಾಣ ಇಲಾಖೆಯು ಜಾರಿಗೊಳಿಸುತ್ತದೆ.
ವಿದ್ಯಾಸಿರಿಯ ಮುಖ್ಯ ಅಂಗಗಳು ಯಾವುವೆಂದರೆ ; ಪ್ರಿ-ಮ್ಯಾಟ್ರಿಕ್ ಮತ್ತು ಪೋಸ್ಟ್-ಮ್ಯಾಟ್ರಿಕ್ ವಿದ್ಯಾರ್ಥಿವೇತನ, ಫ್ರೀಶಿಪ್ ಕಾರ್ಡ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ಭತ್ಯೆ, IAS/KAS ಹಾಗೂ ಇತರ ಹೈ-ಲೇವೆಲ್ ಪರೀಕ್ಷೆಗಳ ತರಬೇತಿಗೆ ವಿಶೇಷ ಸಹಾಯಧನ.
ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ವಿಳಾಸ: https://ssp.postmatric.karnataka.gov.in/
ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in .. 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. Application submission for Vidyasiri scheme extended till December 20th – ತುಳು ಟೈಮ್ಸ್
ಇದನ್ನೂ ಓದಿ :ಹುಟ್ಟು ಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಮೋಹಕತಾರೆ ಗುಡ್ ನ್ಯೂಸ್..!
======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/9__hBRPRAJ0?si=5TToPhSTlJIx-LWk











