ಬೆಂಗಳೂರು: Tulu Times | ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಯುವತಿ ಅಚಲ (22) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬಂಟ್ವಾಳದಲ್ಲಿ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳ ಧ್ವಜಾರೋಹಣ!
ಯುವತಿ ಅಚಲ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಕೆ ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಅಚಲ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಮಯಾಂಕ್ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯ ಮಾಡಿದ್ದಾನೆ.
ಇದನ್ನೂ ಓದಿ: ಮದ್ಯದಂಗಡಿಯಲ್ಲಿ ಮಿತಿಮೀರಿದ ಹಣ ವಸೂಲಿ…!
ಮೊದಲೇ ಡ್ರಗ್ ಅಡಿಕ್ಟ್ ಆಗಿದ್ದ ಮಯಾಂಕ್ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸುತ್ತಿದ್ದ, ಮಾನಸಿಕವಾಗಿಯೂ ಕಿರುಕುಳ ಕೊಡುತ್ತಿದ್ದ. ಫೋನ್ ಮಾಡಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಅಚಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮಗಳನ್ನು ನೆನೆದು ಅಚಲ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಮಗಳ ಸಾವಿಗೆ ಕಾರಣವಾದರನ್ನ ಕೂಡಲೆ ಬಂಧಿಸಿ ಎಂದು ಅಚಲ ಪೋಷಕರು ಆಗ್ರಹಿಸಿದ್ದಾರೆ.
ನಟಿ ಆಶಿಕಾ ರಂಗನಾಥ್ ಮಾವನ ಮಗಳಾಗಿರುವ ಅಚಲ ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದಳು. ಈ ಸಂದರ್ಭದಲ್ಲಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನಂಗೆ ಬಾಡಿಶೇಮಿಂಗ್ ಆಗಿದೆ.. ನಟಿ ಗೀತಾ ಭಾರತಿ ಭಟ್ ಗಂಭೀರ ಆರೋಪ!
Actress Ashika Ranganath’s relative sexually harassed; young woman commits suicide!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











