ಕಾಪು: Tulu Times | ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಇಂದು ಮಧ್ಯಾಹ್ನ ವೇಳೆ ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಡೆಕೊರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದ್ದು, ಟೆಂಪೋ ಕಾಪು ಮಜೂರಿನಿಂದ ಮಲ್ಪೆಗೆ ತರೆಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಟೆಂಪೋದಲ್ಲಿದ್ದವರು ಗಾಡಿಯಲ್ಲಿ ಸಿಲುಕಿಕೊಂಡು ಒತ್ತಾಡುವುದು ಕಂಡುಬಂದಿದೆ. ಈ ಟೆಂಪೋದಲ್ಲಿ
ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದರು ಎನ್ನಲಾಗಿದೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಕೊಂಡಿರುವ ಐವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಐವರು ಮೃತಪಟ್ಟರೆಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆಗೆ ಶರಣು..!
ಪ್ರತ್ಯೇಕ ಪ್ರಕರಣದಲ್ಲಿ ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಯುವತಿ ಅಚಲ (22) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯುವತಿ ಅಚಲ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಕೆ ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಅಚಲ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಮಯಾಂಕ್ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯ ಮಾಡಿದ್ದಾನೆ.
ಮೊದಲೇ ಡ್ರಗ್ ಅಡಿಕ್ಟ್ ಆಗಿದ್ದ ಮಯಾಂಕ್ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸುತ್ತಿದ್ದ, ಮಾನಸಿಕವಾಗಿಯೂ ಕಿರುಕುಳ ಕೊಡುತ್ತಿದ್ದ. ಫೋನ್ ಮಾಡಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಅಚಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮಗಳನ್ನು ನೆನೆದು ಅಚಲ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಮಗಳ ಸಾವಿಗೆ ಕಾರಣವಾದರನ್ನ ಕೂಡಲೆ ಬಂಧಿಸಿ ಎಂದು ಅಚಲ ಪೋಷಕರು ಆಗ್ರಹಿಸಿದ್ದಾರೆ.
Kaup: Goods tempo accident…five people died on the spot!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











