ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಬಿ.ಎಸ್ ಯಡಿಯೂರಪ್ಪರಿಗೆ ತಾತ್ಕಾಲಿಕ ರಿಲೀಫ್ : ಪೋಕ್ಸೋ ಪ್ರಕರಣದಲ್ಲಿ ಮಧ್ಯಂತರ ತಡೆ

ಬೆಂಗಳೂರು : Tulu Times | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವಿದ್ದು, 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸಮಸ್ಯೆ ಪರಿಹಾರ ನೀಡುವಂತೆ ಸಹಾಯ ಕೇಳಿ ತಾಯಿ ಜೊತೆಗೆ ಬಾಲಕಿ ಬಂದಿದ್ದರು. ಈ ಸಂದರ್ಭದಲ್ಲಿ ಬಿಎಸ್‌ವೈ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುವುದು ಆರೋಪಿಸಲಾಗಿತ್ತು. ಈ ಸಂಬಂಧಿಸಿದಂತೆ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು. ಈ ದೂರಿನ ಅನ್ವಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ( ಪೋಕ್ಸೋ) ಅಡಿಯಲ್ಲಿ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿತ್ತು.

ಈ ಪ್ರಕರಣ ಸಾಕಷ್ಟು ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ತನಿಖೆಯನ್ನು ನಡೆಸಿ, ಸಾಕ್ಷ್ಯ ನಾಶ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ ಆರೋಪದ ಅಡಿಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಮೂವರು ಸಹಾಯಕರ ವಿರುದ್ಧ 750 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

ಆದರೆ ಈಗ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಸದ್ಯ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಬಿಎಸ್‌ ಯಡಿಯೂರಪ್ಪನವರ ವಿಚಾರಣೆ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿಯ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಲಿಲ್ಲ ಎಂದು ಹಿರಿಯ ವಕೀಲರು ಯಡಿಯೂರಪ್ಪ ಪರವಾಗಿ ವಾದ ಮಂಡಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಮಧ್ಯಂತರ ತಡೆಯನ್ನು ನೀಡಿದೆ. ಇದರಿಂದಾಗಿ ಯಡಿಯೂರಪ್ಪನವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. Temporary relief for BS Yadiyurappa: Interim stay in POCSO case – ತುಳು ಟೈಮ್ಸ್

ಇದನ್ನೂ ಓದಿ :ರಿಷಭ್‌ ಶೆಟ್ಟಿಗೆ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್..!

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/yek8Z0SdHr4?si=NcsSSQN6v83BB_Eh

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page