ಮಂಗಳೂರು: Tulu Times | ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನದ ಗೊಂದಲಕ್ಕೆ ತೆರೆಬಿದ್ದದೆ. ಇದೀಗ ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ..ಡಿ.ಕೆ ಎಂದು ಕೂಗಿದ ಪ್ರಸಂಗ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣ ಬುಧವಾರ ನಡೆದಿದೆ.
ಇದನ್ನೂ ಓದಿ: ಮಂಗಳೂರು: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ.! ತಪ್ಪಿದ ದುರಂತ
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಬಿದ್ದಿದೆ ಅಂತ ಅಂದುಕೊಂಡಾಗಲೇ ಈ ಘಟನೆ ನಡೆದಿದ್ದು, ವೇಣುಗೋಪಾಲ್ ಮುಂದೆ ‘ಡಿ.ಕೆ..ಡಿ.ಕೆ’ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮಂಗಳೂರು ವಿ.ವಿ ಯಲ್ಲಿ ಮಹಾತ್ಮ ಗಾಂಧಿ ನಾರಾಯಣ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ವೇಣುಗೋಪಾಲ್ ಅವರಿಗೆ ಸ್ವಾಗತ ಕೋರಲು ಬಂದ ಕಾರ್ಯಕರ್ತರು ಡಿ.ಕೆ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ವೇಣುಗೋಪಾಲ್ ಅವರಿಗೆ ದಾರಿ ಮಾಡಿಕೊಡಲು ಪೊಲೀಸರು ಶ್ರಮಪಟ್ಟರು. ಈ ವೇಳೆ ಕಾಂಗ್ರೆಸ್ನ ಹಿರಿಯ ಮುಖಂಡರು ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ನಡೆಯಲಿದೆ ವಿಶೇಷ ಪೂಜೆ
ಇನ್ನು ಡಿಕೆಶಿ ನಿವಾಸದಲ್ಲಿ ಏರ್ಪಡಿಸಿದ್ದ ಚಹಾ ಕೂಟದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಸಂದರ್ಭ ಅಗತ್ಯ ಬಿದ್ದರೆ ವೇಣುಗೋಪಾಲ್ ಜೊತೆ ರಾಜಕೀಯ ವಿಷಯದ ಬಗ್ಗೆ ಚರ್ಚೆ ಮಾಡುವೆ ಎಂದು ತಿಳಿಸಿದ್ದರು. ನಿನ್ನೆ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಉಪಹಾರ ಸೇವನೆ ಮಾಡಿದ್ದಾರೆ. ಕಾವೇರಿ ನಿವಾಸದಿಂದ ಸಿಎಂ ಒಬ್ಬರೇ ಹೊರಟು ಬೆಳಗ್ಗೆ 9:40 ರ ವೇಳೆಗೆ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದರು. ಸಿಎಂ ಆಗಮಿಸಿದ ತಕ್ಷಣ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತ ಕೋರಿದರು. ಸಿಎಂ ಸಿದ್ದರಾಮಯ್ಯ ನಾಟಿಕೋಳಿ ಮೆನು ಸವಿಯಲು ಡಿ ಕೆ ಶಿವಕುಮಾರ್ ಅವರ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಬ್ರೇಕ್ಫಾಸ್ಟ್ ಬಳಿಕ ಇಬ್ಬರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.
People shouted slogans like “D.K.D.K” in front of Venugopal- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











