ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

ಪುತ್ತೂರು: ಮಾದಕವಸ್ತು ಮಾರಾಟಕ್ಕೆ ಯತ್ನ – ಓರ್ವನ ಬಂಧನ

ಪುತ್ತೂರು – ತುಳು ಟೈಮ್ಸ್‌: ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಬಂಧಿತ.

ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಉಮ್ಮರ್ ಫಾರೂಕ್ ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ನಟ ದರ್ಶನ್‌ ಗ್ಯಾಂಗ್‌ ಗೆ ಮತ್ತೊಂದು ಶಾಕ್..!‌ ಏನಾಯ್ತು ಗೊತ್ತಾ?

ಉಮ್ಮರ್ ಫಾರೂಕ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯ ಕಲಂ 8(C), 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ಶಂಕಿತನನ್ನು ವಶಕ್ಕೆ ಪಡೆದು ವಿಚಾರಿಸಿ, ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಮಾರಾಟಕ್ಕಾಗಿ ಇಟ್ಟುಕೊಂಡಿದ್ದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ಪತ್ತೆಯಾಗಿದೆ. ಆರೋಪಿಯ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಬೇರೆ ಪ್ರಕರಣಗಳು ದಾಖಲಾಗಿದೆ.

Puttur Town police have arrested a person on the charge of try to sell narcotic drugs. Arrested identified as Kabaka residency Umar Farooq (41). Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page