Tamilnadu: ನಟ ದಳಪತಿ ವಿಜಯ್ (Thalapathy Vijay) ನೇತೃತ್ವದ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ದುರಂತ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ತಿಳಿದೇ ಇದೆ. ಇದೀಗ ಕರೂರ್ ಕಾಲ್ತುಳಿತದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ತಮಿಳಗ ವೆಟ್ರಿ ಕಳಗಂ ಮತ್ತು ಪಿಎಚ್ ದಿನೇಶ್ ಇನ್ನಿತರರ ನಡುವಣ ಪ್ರಕರಣ ಇದಾಗಿದೆ. ತಮಿಳಿನ ಸೂಪರ್ ಸ್ಟಾರ್ ನಟ ವಿಜಯ್ ಅವರ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೆಪ್ಟೆಂಬರ್ 27ರಂದು ರಾಜಕೀಯ ಸಮಾವೇಶ ನಡೆಸಿತ್ತು. ಈ ವೇಳೆ ವಿಜಯ್ ಅವರ ಭಾಷಣ ಕೇಳಲು ಲಕ್ಷಾಂತರ ಅಭಿಮಾನಿಗಳು ಬಂದಿದ್ದರು. ದೊಡ್ಡಮಟ್ಟದ ಜನಸಮೂಹ ಹರಿದುಬಂದ ಕಾರಣ ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಅಕ್ಟೋಬರ್ 3ರಂದು ಹೊರಡಿಸಿದ್ದ ಆದೇಶವನ್ನು ಟಿವಿಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಸುಪ್ರೀಂ ಕೋರ್ಟ್ ನಿಂದ ಆದೇಶ ಪ್ರಕಟ
ಮದ್ರಾಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸದ್ಯ ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಎನ್ ವಿ ಅಂಜಾರಿಯಾ ಅವರಿದ್ದ ಪೀಠ ತೀರ್ಪು ನೀಡಿದೆ. ಅದರ ಪ್ರಕಾರ ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿ ಅಜಯ್ ರಾಸ್ತೋಗಿ ಅವರ ನೇತೃತ್ವದ ತ್ರಿಸದಸ್ಯ ಸಮಿತಿ ತನಿಖೆಯ ಮೇಲ್ವಿಚಾರಣೆ ನಡೆಸಲಿದೆ ಎಂದಿದ್ದಾರೆ.
ತದ್ವಿರುದ್ಧ ತೀರ್ಪು ಕೊಟಿದ್ದ ನ್ಯಾಯಾಲಯ!?
ಕರೂರ್ ಕಾಲ್ತುಳಿತದ ಕುರಿತು ಮದ್ರಾಸ್ ಹೈಕೋರ್ಟ್‌ನ ಎರಡು ಪೀಠಗಳು ನೀಡಿದ್ದ ತೀರ್ಪು ವಿಭಿನ್ನವಾಗಿತ್ತು. ಪರಸ್ಪರ ವಿರೋಧಾಭಾಸದ ತೀರ್ಪುಗಳ ಔಚಿತ್ಯವನ್ನು ನ್ಯಾಯಾಲಯವು ಈ ಹಿಂದೆಯೇ ಪ್ರಶ್ನಿಸಿತ್ತು. ಮಧುರೈ ಪೀಠ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ತೀರ್ಪು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಚೆನ್ನೈನಲ್ಲಿರುವ ಪ್ರಧಾನ ಪೀಠ ಎಸ್‌ಐಟಿ ತನಿಖೆಗೆ ಆದೇಶಿಸಿತ್ತು.

ಎಸ್‌ಐಟಿ ತನಿಖೆಗೆ ಆದೇಶ
ಕರೂರ್ ಕಾಲ್ತುಳಿತವನ್ನು ರಾಜ್ಯ ಸರ್ಕಾರ ನಡೆಸಿದ ತನಿಖೆ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಎನ್ ಸೆಂಥಿಲ್ ಕುಮಾರ್ ಅವರಿದ್ದ ಚೆನ್ನೈನ ಏಕಸದಸ್ಯ ಪೀಠ ಎಸ್‌ಐಟಿ ತನಿಖೆಗೆ ಆದೇಶಿಸಿತ್ತು. ಕಾಲ್ತುಳಿತದ ನಡುವೆ ವಿಜಯ್ ಅವರ ಬಸ್ ಡಿಕ್ಕಿ ಹೊಡೆದ ಎರಡು ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮಿಳುನಾಡಿನ ರಾಜ್ಯ ಸರ್ಕಾರ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು.
ಅಲ್ಲದೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಯಾವುದೇ ಎಫ್‌ಐಆರ್‌ನಲ್ಲಿ ನಟ ವಿಜಯ್ ಹೆಸರಿರಲಿಲ್ಲ. ಆದರೆ ಹೈಕೋರ್ಟ್ ಆದೇಶದ ಬಳಿಕವಷ್ಟೇ ಎರಡು ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಜಯ್ ಅವರ ಪ್ರಚಾರ ವಾಹನದ ಚಾಲಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿತ್ತು.
ಕಾಲ್ತುಳಿತದ ನಂತರ ಟಿವಿಕೆ ನಾಯಕತ್ವ ತೋರಿದ ವರ್ತನೆಯನ್ನು ಹೈಕೋರ್ಟ್ ಟೀಕಿಸಿತ್ತು.

ಏಕ ಸದಸ್ಯ ಪೀಠದ ಆದೇಶವನ್ನು ಟಿವಿಕೆ ಈಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಕ್ಷ ಮತ್ತು ನಾಯಕರ ವಿರುದ್ಧ ನ್ಯಾಯವ್ಯಾಪ್ತಿ ಮೀರಿದ ಅವಲೋಕ ಮಾಡಿದೆ ಎಂದು ಟಿವಿಕೆ ವಾದಿಸಿತು. ರಾಜಕೀಯ ಸಮಾವೇಶಗಳಿಗೆ ವಿಶೇಷ ಕಾರ್ಯಾಚರಣಾ ಕಾರ್ಯವಿಧಾನ (ಎಸ್‌ಒಪಿ) ರಚಿಸಬೇಕೆಂದಷ್ಟೇ ಎಸ್‌ಒಪಿಯಲ್ಲಿ ಮನವಿ ಮಾಡಲಾಗಿದ್ದರೂ ಅದನ್ನು ಮೀರಿದ ತೀರ್ಪು ಹೊರಬಿದ್ದಿದೆ ಎಂದು ದೂರಿತ್ತು. ಈಗ
ಟಿವಿಕೆ ಪರವಾಗಿ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ ಮತ್ತವರ ತಂಡ, ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಪಿ ವಿಲ್ಸನ್ ವಾದ ಮಂಡಿಸಿದ್ದರು. ವಸ್ತುಸ್ಥಿತಿ ಮನಗಂಡ ಬಳಿಕ, ವಿಷಯವು ಪ್ರಜೆಗಳ ಮೂಲಭೂತ ಹಕ್ಕಿಗೆ ಸಂಬಂಧಪಟ್ಟದ್ದಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ನಿರ್ದೇಶಿಸಲಾಗಿದೆ. ಪಕ್ಷಗಾರರ ತಳಮಳ ಶಮನಪಡಡಿಸಲು, ಮೂರು ಮಂದಿಯ ಸಮಿತಿ ರಚಿಸುವ ಪ್ರಸ್ತಾಪ ಮಾಡುತ್ತಿದ್ದೇವೆ. ಸಮಿತಿಯ ನೇತೃತ್ವ ತೆಗೆದುಕೊಳ್ಳಲು ನ್ಯಾಯಮೂರ್ತಿ ಅಜಯ್ ರಕ್ಕೋಗಿ ಅವರನ್ನು ವಿನಂತಿಸುತ್ತಿದ್ದೇವೆ’ ಎಂದು ಕೋರ್ಟ್ ಹೇಳಿದೆ.
ರಸ್ತೋಗಿಯವರ ನಿರ್ದೇಶನದಂತೆ ಸಮಿತಿ ತನ್ನದೇ ಆದ ಪ್ರಕ್ರಿಯೆಗಳನ್ನು ಅನುಸರಿಸಬಹುದು. ಸಿಬಿಐ ತನ್ನ ತನಿಖಾ ವರದಿಯನ್ನು ಪ್ರತಿ ತಿಂಗಳು ಸಮಿತಿಗೆ ಸಲ್ಲಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: RSS Ban ಮಾಡಲು ಸಾಧ್ಯವೇ ಇಲ್ಲಾ.ಏಕೆ ಗೊತ್ತಾ?
ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯುಟ್ಯೂಬ್ ಚಾನೆಲ್ ಕ್ಲಿಕ್ ಮಾಡಿ https://www.youtube.com/@tulutimess











