ಸುಳ್ಯ – ತುಳು ಟೈಮ್ಸ್: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಸುಳ್ಯ ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ಪೂಜಾ ಮೃತಪಟ್ಟ ಯುವತಿ.
ಮೂರು ದಿನಗಳ ಹಿಂದೆ ಪೂಜಾ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಡಿ.5ರ ಶುಕ್ರವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ: ಕಟೀಲು ದೇವಸ್ಥಾನದಿಂದ ಬರುವಾಗ ಕಾರು ಅಪಘಾತ
ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ. ವಿಷ ಸೇವಿಸಲು ಕಾರಣ ತಿಳಿದುಬಂದಿಲ್ಲ.
Sullia: College Student Pooja died after consuming Rat Poison. Tulu Times
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/@tulutimess











