ಕರ್ನಾಟಕ: Tulu Times | ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಸಂಗತಿಗೆ ಇಂದು ತೆರೆ ಬಿದ್ದಿದೆ.
ಹೌದು, ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಹಾಗೂ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಎಂಗೇಜ್ ಮೆಂಟ್ ಹಾಗೂ ಅರಶಿಣ ಶಾಸ್ತ್ರ ನಡೆದಿತ್ತು ಆದ್ರೆ ಈಗ ಮದುವೆ ಅಧಿಕೃತವಾಗಿ ರದ್ದಾಗಿರುವ ಮಾಹಿತಿ ಹೊರಬಿದ್ದಿದೆ. ಮದುವೆ ಮುರಿದ ಬಗ್ಗೆ ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸ್ವತಃ ಸ್ಮೃತಿ ಮಂಧಾನ ಇನ್ಸ್ಟಾಗ್ರಾಂನಲ್ಲಿ ಬರೆದು ತೆರೆ ಎಳೆದಿದ್ದಾರೆ.
ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಏನಿತ್ತು..?
ಕಳೆದ ಕೆಲವು ವಾರಗಳಿಂದ ನನ್ನ ವೈಯಕ್ತಿಕ ಬದುಕಿನ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನಾನು ಖಾಸಗಿತನವನ್ನು ಬಯಸುವ ವ್ಯಕ್ತಿ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ. ನಮ್ಮ ಮದುವೆ ರದ್ದಾಗಿದೆ ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ. ಎರಡೂ ಕುಟುಂಬಗಳ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ. ಭಾರತಕ್ಕಾಗಿ ಆಡುವುದು ಮತ್ತು ಟ್ರೋಫಿಗಳನ್ನು ಗೆಲ್ಲುವುದೇ ನನ್ನ ಗುರಿ. ನನ್ನ ಗಮನ ಯಾವಾಗಲೂ ಕ್ರಿಕೆಟ್ ಮೇಲೆಯೇ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಮೃತಿ ಮತ್ತು ಪಲಾಶ್ ಅವರ ಅರಶಿಣ ಶಾಸ್ತ್ರ ಅದ್ದೂರಿಯಾಗಿ ನಡೆದಿತ್ತು, ನಂತರ ಸ್ಮೃತಿ ತಂದೆಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಮದುವೆಯನ್ನು ನಿಲ್ಲಿಸಲಾಗಿತ್ತು. ನಂತರ ಪಲಾಶ್ ಅವರ ವಿರುದ್ಧ ವಂಚನೆಯ ಆರೋಪಗಳು ಕೇಳಿಬಂದಿದ್ದವು. ಆದರೆ ಪಲಾಶ್ ಕುಟುಂಬ ಈ ಆರೋಪಗಳನ್ನು ಸುಳ್ಳು ಎಂದು ಹೇಳಿತ್ತು. ಮದುವೆಗೆ ಸಮಾರಂಭದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸ್ಮೃತಿ ಎಲ್ಲಾ ಬೆಳವಣಿಗೆಗೆ ತೆರೆಬಿದ್ದಿದೆ.
What did Smriti Mandhana say after breaking her silence about marriage?- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











