ಬ್ರೇಕಿಂಗ್ ನ್ಯೂಸ್
ಕರಾವಳಿ

Karkala: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

Brahmavara: ರೈಲಿಗೆ ತಲೆಕೊಟ್ಟು ಮಾಜಿ ಶಾಸಕರ ಪುತ್ರನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಈ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಬಾರಕೂರಿನಲ್ಲಿ ನಡೆದಿದೆ.

ಸರಳ ವ್ಯಕ್ತಿತ್ವ ಹೊಂದಿದ್ದ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್‌ ಶಾಪ್ ವ್ಯವಹಾರವನ್ನು ಮಾಡಿಕೊಂಡಿದ್ದರು. ಇವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಬಾರಕೂರಿನ ಬಳಿಯಲ್ಲಿ ರೈಲು ಹಳಿಗೆ ತಲೆಕೊಟ್ಟು ಜೀವಾಂತ್ಯ ಮಾಡಿಕೊಂಡಿದ್ದು, ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Raju thalikote:ಬಿಗ್ ಬಾಸ್ ಸ್ಪರ್ಧಿ ರಾಜು ತಾಳಿಕೋಟೆ ನಿಧನ

ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯುಟ್ಯೂಬ್‌ ಚಾನೆಲ್‌ ಕ್ಲಿಕ್‌ ಮಾಡಿ https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 30

You cannot copy content of this page