ಪುತ್ತೂರು – ತುಳು ಟೈಮ್ಸ್: ಪಾರ್ಕ್ ಮಾಡಿದ್ದ ಟ್ರಾನ್ಸ್‌ಪೋರ್ಟ್ ವಾಹನದಿಂದ ಬರೋಬ್ಬರಿ 21 ಲಕ್ಷ ರೂ ಮೌಲ್ಯದ ಕಾಫಿ ಬೀಜ ಕದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋ ಹಾಗೂ ಕಳುವಾದ 80 ಕಾಫಿ ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆಶ್ಲೇಷ ಭಟ್ ಹಾಗೂ ಆತನ ಸಹಚರರಾದ ಮಹಮ್ಮದ್ ಅಶ್ರಫ್, ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಬಂಧಿತ ಆರೋಪಿಗಳು.
ಪ್ರಕರಣದ ವಿವಿರ:
ಪುತ್ತೂರಿನ ಕಬಕ ನಿವಾಸಿ ತೃತೇಶ್ ಎಂಬವರು ಡಿ.3ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್‌ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿದ ತೃತೇಶ್, ನೆಹರೂ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ತನ್ನ ಲಾರಿಯನ್ನು ನಿಲ್ಲಿಸಿ ಮನೆಗೆ ತೆರಳಿದ್ದಾರೆ. ಮರುದಿನ ಡಿ.೪ ರಂದು ಬೆಳಿಗ್ಗೆ ತೃತೇಶ್ ಕಾಫಿ ಬೀಜಗಳನ್ನು ತುಂಬಿದ್ದ ಲಾರಿಯನ್ನು ಮಂಗಳೂರು ಬಂದರಿಗೆ ತಲುಪಿಸಿದ್ದಾರೆ.
ಇದನ್ನೂ ಓದಿ: ಪುತ್ತೂರು: ಬರೋಬ್ಬರಿ 21 ಲಕ್ಷ ರೂ. ಮೌಲ್ಯದ ಕಾಫಿ ಬೀಜ ಕಳವು
ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿಗಳು ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು 80 ಗೋಣಿ ಚೀಲಗಳು ಕಳುವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ತೃತೇಶ್ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿ ಆಶ್ಲೇಷ ಭಟ್ ಎಂಬಾತ, ತನ್ನ ಸಹಚರರಾದ ಮಿಥುನ್ ಕುಮಾರ್,ನಾರಾಯಣ ಶೆಟ್ಟಿಗಾರ್, ವಿಜಯ ಶೆಟ್ಟಿ, ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ವಿಚಾರಣೆಯ ವೇಳೆ ಬಹಿರಂಗವಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 120/2025 ಕಲಂ: 303(2) ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
In a major breakthrough, Puttur Town Police have arrested five persons for allegedly stealing coffee bags worth ₹21.44 lakh from a lorry transporting goods from Piriya to Mangaluru. The arrested accused have been identified as Ashlesha Bhatt (prime accused), Narayana Shettigar, Mithun Kumar, Vijay Shetty and Mohammad Ashraf. Tulu Times.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











