ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಯನ್ನು ಹಾಡಿಹೊಗಳಿದ್ದಾರೆ. ಭಾರತ ಅತ್ಯುತ್ತಮ ದೇಶ. ಅದನ್ನು ಮುನ್ನಡೆಸುತ್ತಿರುವವರು ನನ್ನ ಉತ್ತಮ ಸ್ನೇಹಿತ ಎಂದು ಟ್ರಂಪ್ ಹೇಳಿಕೆ ಕೊಟ್ಟಿದ್ದಾರೆ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದು ಅಂತರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ನಂತರದ ಬೆಳವಣಿಗೆಯಲ್ಲಿ ಟ್ರಂಪ್ ಮತ್ತು ಮೋದಿ ನಡುವೆ ಬಿರುಕು ಬಿಟ್ಟಿವೆ ಎಂಬ ಅಭಿಪ್ರಾಯಗಳೂ ಮೂಡಿದ್ದವು. ಸದ್ಯ ಡೋನಾಲ್ಡ್ ಹೇಳಿಕೆ ಭಾರೀ ಸಂಚಲನ ಸೃಷ್ಟಿಸಿದೆ.
ಗಾಜಾ ಕದನ ವಿರಾಮ ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಮಾಡಿಕೊಂಡ ಒಪ್ಪಂದವನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಅದರ ಬೆನ್ನಲ್ಲೇ, ಇದೀಗ ವಿಶೇಷವೆಂದರೆ, ಟ್ರಂಪ್ ಈ ಹೇಳಿಕೆ ನೀಡುವಾಗ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಟ್ರಂಪ್ ಹಿಂದೆಯೇ ನಿಂತುಕೊಂಡಿದ್ದರು. ಪಾಕ್ ಪ್ರಧಾನಿಯ ಮುಂದೆಯೇ ಮೋದಿಯನ್ನು ಹೊಗಳಿದ್ದಾರೆ.
ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದದ ನಂತರ ಈಜಿಪ್ಟ್ ನಗರದಲ್ಲಿ ವಿಶ್ವ ನಾಯಕರ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಭಾರತ ಒಂದು ಅದ್ಭುತ ದೇಶವಾಗಿದ್ದು, ನನ್ನ ಒಬ್ಬ ಆತ್ಮೀಯ ಸ್ನೇಹಿತ ಉನ್ನತ ಸ್ಥಾನದಲ್ಲಿದ್ದು ಮುನ್ನಡೆಸುತ್ತಿದ್ದಾರೆ. ಅವರು ಅದ್ಭುತ ಕೆಲಸ ಮಾಡಿದ್ದಾರೆ. ಪಾಕಿಸ್ತಾನ ಮತ್ತು ಭಾರತ ಒಟ್ಟಿಗೆ ತುಂಬಾ ಚೆನ್ನಾಗಿ ಬದುಕಲಿವೆ ಎಂದು ನಾನು ಭಾವಿಸುತ್ತೇನೆ’ ಎಂದ ಟ್ರಂಪ್ ಹಿಂದೆ ತಿರುಗಿ ಶೆಹಬಾಜ್ ಷರೀಫ್ ಮುಖ ನೋಡಿದ್ದಾರೆ.
ಅಲ್ಲದೆ, ಪಾಕ್ ಪ್ರಧಾನಿಯ ಮುಖ ನೋಡಿ, ‘ಹೌದಲ್ಲವೇ’ ಎಂದು ಪ್ರಶ್ನಿಸಿದ್ದಾರೆ. ಆಗ ಪಾಕಿಸ್ತಾನ ಪ್ರಧಾನಿ ನಗೆಯಾಡುತ್ತಾ ಹೌದೆಂದು ತಲೆಯಾಡಿಸಿದ್ರು. ಇದಕ್ಕೂ ಮೊದಲು ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಶ್ಲಾಘಿಸಿದ ಡೊನಾಲ್ಡ್, ಪಾಕಿಸ್ತಾನ ಪ್ರಧಾನಿಯನ್ನು ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಹ್ವಾನಿಸಿದರು.
ಇದನ್ನೂ ಓದಿ: Raju thalikote:ಬಿಗ್ ಬಾಸ್ ಸ್ಪರ್ಧಿ ರಾಜು ತಾಳಿಕೋಟೆ ನಿಧನ
ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯುಟ್ಯೂಬ್ ಚಾನೆಲ್ ಕ್ಲಿಕ್ ಮಾಡಿ https://www.youtube.com/@tulutimess











